Advertisement

ಕಾರ್ಮಿಕರ ಬದುಕು ಹಸನುಗೊಳಿಸುವ ಪಣ

06:25 PM Jun 29, 2022 | Adarsha |

ಶಿವಮೊಗ್ಗ: ಕಾರ್ಮಿಕರ ಮತ್ತು ಅವರ ಮಕ್ಕಳಭವಿಷ್ಯ ಉಜ್ವಲಗೊಳಿಸಲು ಇಲಾಖೆಯಲ್ಲಿಅ ಧಿಕಾರಿಗಳ ತಂಡ ಶ್ರಮಿಸುತ್ತಿದೆ. ಕೋವಿಡ್‌ಸಂಕಷ್ಟದ ಸಮಯದಲ್ಲಿ ಕಾರ್ಮಿಕರ ಹಿತ ಕಾಯಲುರಾಜ್ಯದ ಕಾರ್ಮಿಕ ಇಲಾಖೆ ಚಾರಿತ್ರಿಕ ಕೆಲಸಮಾಡಿದೆ ಎಂದು ಕಾರ್ಮಿಕ ಸಚಿವ ಶಿವರಾಮ್‌ಹೆಬ್ಟಾರ್‌ ಹೇಳಿದರು.

Advertisement

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಮಂಡಳಿ ಆಶ್ರಯದಲ್ಲಿ ನಗರದ ಕುವೆಂಪುರಂಗಮಂದಿರದಲ್ಲಿ ಮಂಗಳವಾರ ನೋಂದಾಯಿತಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರುಹಾಗೂ ಅವರ ಅವಲಂಬಿತರಿಗೆ ಏರ್ಪಡಿಸಲಾಗಿದ್ದಆರೋಗ್ಯ ತಪಾಸಣೆ, ತರಬೇತಿ ಮತ್ತು ಸಂಚಾರಿಆರೋಗ್ಯ ಕ್ಲಿನಿಕ್‌ ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.

ಶಿವಮೊಗ್ಗ ಸಂಸದರ ಅತ್ಯುತ್ಸಾಹದಿಂದ ಜಿಲ್ಲೆಯಲ್ಲಿತ್ವರಿತವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣಕಾರ್ಮಿಕರ ಆರೋಗ್ಯ ತಪಾಸಣೆ ಕಾರ್ಯಕ್ಕೆಚಾಲನೆ ನೀಡಲಾಗಿದೆ. ನಮ್ಮ ಸರ್ಕಾರ ಕಾರ್ಮಿಕರಬದುಕನ್ನು ಹಸನು ಮಾಡಲು ಪಣ ತೊಟ್ಟು ಅನೇಕಹೊಸ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.

ಇಂದು ಚಾಲನೆ ನೀಡಲಾದ ಉಚಿತ ಆರೋಗ್ಯತಪಾಸಣೆಯಲ್ಲಿ 21 ರೀತಿಯ ಪರೀಕ್ಷೆಗಳನ್ನುಮಾಡಲಾಗುತ್ತಿದೆ. ಖಾಸಗಿಯಾಗಿ ಪರೀಕ್ಷೆಮಾಡಿಸಿದರೆ ಒಬ್ಬರಿಗೆ ರೂ.12 ಸಾವಿರದವರೆಗೆವೆಚ್ಚ ತಗುಲುತ್ತದೆ. ಇಂತಹ ಪರೀಕ್ಷೆಯನ್ನು ಮೊದಲಹಂತದಲ್ಲಿ ಸುಮಾರು 30 ಸಾವಿರ ಕಾರ್ಮಿಕರಿಗೆಮಾಡಲಾಗುತ್ತಿದೆ. ಕಾರ್ಮಿಕರು ಈ ಕಾರ್ಯಕ್ರಮದಸದುಪಯೋಗ ಪಡೆಯಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next