ಶಿವಮೊಗ್ಗ: ಸಿದ್ದರಾಮೋತ್ಸವ ಮುಗಿದ ತಕ್ಷಣ ಕಾಂಗ್ರೆಸ್ ಎರಡುಭಾಗವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಧೈರ್ಯವಿದ್ದರೆಅದನ್ನು ವಿರೋಧಿ ಸಬೇಕಿತ್ತು. ಅದನ್ನು ಬಿಟ್ಟು ಸಿದ್ದರಾಮೋತ್ಸವಕ್ಕೆಪರ್ಯಾಯವಾಗಿ ಕಾಂಗ್ರೆಸ್ ಉತ್ಸವ ಮಾಡಲು ಹೊರಟಿರುವುದು ಅವರ ಶಿಖಂಡಿತನತೋರಿಸುತ್ತದೆ.
ಈಗಲೇ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಕಾಂಗ್ರೆಸ್‌ನಲ್ಲಿ ಒಳಜಗಳಶುರುವಾಗಿದೆ. ಚುನಾವಣೆಗೆ ನಿಂತರೆ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯಇಬ್ಬರೂ ಸೋಲುತ್ತಾರೆ. ಇನ್ನು ಮುಖ್ಯಮಂತ್ರಿಯಾಗುವ ಪ್ರಶ್ನೆ ಎಲ್ಲಿಂದ? ಅಧಿಕೃತವಿರೋಧ ಪಕ್ಷದ ಅರ್ಹತೆಯನ್ನೂ ಕಾಂಗ್ರೆಸ್ ಕಳೆದುಕೊಳ್ಳಲಿದೆ ಎಂದರು. ನಿರ್ದೇಶಕಿಲೀನಾ ಮಣಿಮೇಖಲೈ ಕಾಳಿಕಾ ಮಾತೆಯ ಕೈಗೆ ಸಿಗರೇಟ್ ಕೊಟ್ಟು ಹಿಂದೂ ಸಂಸ್ಕೃತಿಗೆಅಪಮಾನ ಮಾಡಿದ್ದು ಅಕ್ಷಮ್ಯ ಅಪರಾಧ.
ಸಾವಿರಾರು ವರ್ಷಗಳಿಂದ ಭಾರತೀಯಸಂಸ್ಕೃತಿ “ಸರ್ವೇಜನ ಸುಖೀನೋಭವಂತು’ ಎಂದು ಹೇಳುತ್ತಾ ವಿಶ್ವಕ್ಕೆ ಮಾರ್ಗದರ್ಶನನೀಡಿದೆ. ಯಾರೋ ಒಬ್ಬರು ಅವಮಾನ ಮಾಡಿದಾಕ್ಷಣ ಕಾಳಿಕಾ ಮಾತೆಯನ್ನುಪೂಜಿಸಿಕೊಂಡು ಬಂದವರ ಗೌರವ ಕಡಿಮೆಯಾಗುವುದಿಲ್ಲ. ದುಷ್ಟ ಸಂಹಾರಕ್ಕೆಅವತಾರ ತಾಳಿದ ಕಾಳಿ ಮಾತೆ ಸರಿಯಾದ ಬುದ್ಧಿ ನೀಡುತ್ತಾಳೆ.
ಹಿಂದೂಗಳ ಆಕ್ರೋಶಕ್ಕೆಈಗಾಗಲೇ ಅದು ಕಾರಣವಾಗಿದ್ದು, ಸಂಬಂಧಪಟ್ಟ ಅಧಿ ಕಾರಿಗಳು ಆಕೆಯನ್ನು ಬಂಧಿಸುವ ಸಂಭವವಿದೆ. ಧರ್ಮಸ್ಥಳದ ಧರ್ಮಾ ಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಸೇರಿದಂತೆ ನಾಲ್ವರಿಗೆ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಸ್ವಾಗತಾರ್ಹ.ಈ ಬಗ್ಗೆ ರಾಜಕಾರಣ ಸಲ್ಲದು. ಕಳೆದ ಬಾರಿ ಮಳೆಯಿಂದಾದ ಅನಾಹುತವನ್ನುಗಮನದಲ್ಲಿಟ್ಟುಕೊಂಡು ಈ ಬಾರಿ ಅನೇಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮನೆಬಿದ್ದವರಿಗೆ ಸರ್ಕಾರದ ವತಿಯಿಂದ ಪರಿಹಾರ ನೀಡಲಾಗುವುದು ಎಂದರು.