Advertisement
ತರೀಕೆರೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರನ್ನು ಕಾರೇಹಳ್ಳಿ ಚೆಕ್ ಪೋಸ್ಟ್ನಲ್ಲಿ ತಡೆದು ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಬೆಳೆಕಿಗೆ ಬಂದಿದೆ. ಕಾರು ಚಾಲಕ ಮುರುಗ (32) ಎಂಬಾತನನ್ನು ಬಂಧಿಸಲಾಗಿದೆ. ಈತ ಭದ್ರಾವತಿಯ ಸಂಕ್ಲಿಪುರದವನು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Articles
Advertisement
ಮುರುಗ ಚಲಾಯಿಸುತ್ತಿದ್ದ ಕಾರಿನಲ್ಲಿ ಲಕ್ಷ ಲಕ್ಷ ಮೌಲ್ಯದ ಗಾಂಜಾ ಪತ್ತೆಯಾಗಿದೆ. ಒಟ್ಟು 48 ಕೆಜಿ 656 ಗ್ರಾಂ ತೂಕದ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 5.83 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇನ್ನು, ಮುರುಗನ ಬಳಿ ಇದ್ದ ಮೊಬೈಲ್, ಕೃತ್ಯಕ್ಕೆ ಬಳಕೆ ಮಾಡಿಕೊಂಡ ಓಮ್ನಿ ಕಾರನ್ನ ವಶಕ್ಕೆ ಪಡೆಯಲಾಗಿದೆ. ಈತನ ವಿರುದ್ದ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ ಗಳು ಮತ್ತು ಎನ್ ಡಿ ಪಿಎಸ್ ಕಾಯ್ದೆ ಅಡಿ ಕೇಸ್ ದಾಖಲು ಮಾಡಲಾಗಿದೆ.
ಮೆಕ್ಸಿಕೋದ ಗಾಂಜಾ ಸಾಗಣೆದಾರರ ರೀತಿ
ಮೆಕ್ಸಿಕೋ ದೇಶದ ಡ್ರಗ್ಸ್ ದಂಧೆಕೋರರ ಮಾದರಿಯಲ್ಲೆ ಮುರುಗ ಗಾಂಜಾ ಸಾಗಣೆ ಮಾಡಲು ಯತ್ನಿಸಿದ್ದಾನೆ. ಮೆಕ್ಸಿಕೋದ ಡ್ರಗ್ಸ್ ದಂಧೆಕೋರರು ಡ್ರಗ್ಸ್ ಪ್ಯಾಕೆಟ್ಗಳನ್ನು ವಾಹನಗಳ ಟೈರ್, ಚಾರ್ಸಿ, ಪೆಟ್ರೋಲ್ ಟ್ಯಾಂಕ್, ಡ್ಯಾಶ್ ಬೋರ್ಡ್ ಸೇರಿದಂತೆ ವಿವಿಧೆಡೆ ಬಚ್ಚಿಟ್ಟು ಸಾಗಣೆ ಮಾಡುತ್ತಾರೆ. ಅಮೆರಿಕಾದ ಗಡಿಯಲ್ಲಿ ವಿಶೇಷ ತನಿಖಾ ತಂಡ ಇಂತಹ ಡ್ರಗ್ ಪೆಡ್ಲರ್ ಗಳ ಹೆಡೆಮುರಿ ಕಟ್ಟುತ್ತಿದ್ದಾರೆ.
ಶಿವಮೊಗ್ಗ ಪೊಲೀಸ್ ವಿಶೇಷ ಟೀಂ
ಗಾಂಜಾ ಸಾಗಣೆದಾರರಿಗೆ ಬಿಸಿ ಮುಟ್ಟಿಸಲು ವಿಶೇಷ ತಂಡ ರಚಿಸಲಾಗಿತ್ತು. ಭದ್ರಾವತಿಯ ಹೆಚ್ಚುವರಿ ರಕ್ಷಣಾಧಿಕಾರಿ, ಶಿವಮೊಗ್ಗ ಡಿವೈಎಸ್ಪಿ, ಕುಂಸಿ ಠಾಣೆ ಇನ್ಸ್ ಪೆಕ್ಟರ್ ನೇತೃತ್ವದ ವಿಶೇಷ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.