Advertisement

ಭದ್ರಾ ಜಲಾಶಯದಿಂದ ನೀರು ಬಿಡುಗಡೆ

06:44 PM Aug 06, 2021 | Shreeraj Acharya |

ಶಿವಮೊಗ್ಗ: ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಪ್ರತಿದಿನ 1600 ಕ್ಯೂಸೆಕ್ಸ್‌ ನೀರನ್ನು ಹರಿಬಿಡಲಾಗುತ್ತಿದೆ ಎಂದು ಭದ್ರಾ ಜಲಾಶಯದ ಸೂಪರಿಂಟೆಂಡೆಂಟ್‌ ಇಂಜಿನಿಯರ್‌ ಚಂದ್ರಹಾಸ ಹೇಳಿದರು.

Advertisement

ಗುರುವಾರ ಜಲಾಶಯದ ನಾಲ್ಕು ಗೇಟುಗಳ ಮುಖಾಂತರ ನೀರನ್ನು ಹರಿಯಬಿಟ್ಟ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪ್ರಸ್ತುತ ಸಂದರ್ಭದಲ್ಲಿ ಹಲವು ದಶಕಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಳೆಗಾಲದ ಆರಂಭದಲ್ಲಿಯೇ ಜಲಾಶಯ ಭರ್ತಿಯಾಗುವ ಹಂತ ತಲುಪಿದೆ. ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಲು ಇನ್ನೂ ಒಂದೂವರೆ ಅಡಿ ಬಾಕಿ ಇದೆ. ನೀರಿನ ಒಳಹರಿವು ಹೀಗೆಯೇ ಮುಂದುವರಿದಲ್ಲಿ ಶೀಘ್ರದಲ್ಲಿ ಜಲಾಶಯ ಭರ್ತಿಯಾಗಲಿದೆ ಎಂದ ಅವರು, ಒಳಹರಿವಿನ ಪ್ರಮಾಣವನ್ನು ನೋಡಿಕೊಂಡು ನೀರನ್ನು ಹೊರಬಿಡಲಾಗುವುದು ಎಂದರು.

ಜಲಾಶಯ ತುಂಬುವ ಹಂತದಲ್ಲಿದ್ದು, ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ನದಿಪಾತ್ರದ ಜನರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ನದಿ ಪಾತ್ರ ಜನರಿಗೆ ಹಾಗೂ ಜಾನುವಾರುಗಳನ್ನು ಮೇಯಿಸದಂತೆ ಈಗಾಗಲೇ ಸೂಚಿಸಲಾಗಿದೆ ಎಂದರು. ಪ್ರಸ್ತುತ 15206 ಕ್ಯೂಸೆಕ್ಸ್‌ ಒಳಹರಿವು ಇದ್ದು, ಭದ್ರಾ ಬಲದಂಡೆ ಮತ್ತು ಬಲದಂಡೆ, ವಿದ್ಯುತ್‌ ಉತ್ಪಾದನಾ ಘಟಕ ಮುಂತಾದ ನಾಲೆಗಳು ಸೇರಿದಂತೆ ಒಟ್ಟು 3911ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದೆ. ಒಳಹರಿವು ಹೆಚ್ಚಳವಾದಂತೆ ಹೊರಬಿಡುವ ನೀರನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದರು.

ಈ ನೀರು ತುಂಗಭದ್ರಾ ನದಿ ಹಾಗೂ ಏತ ನೀರಾವರಿ ಯೋಜನೆಗಳು, ನೆರೆಯ ಜಿಲ್ಲೆಗಳ ಕೆರೆ ಕಟ್ಟೆ ಕಾಲುವೆಗಳನ್ನು ಭರ್ತಿ ಮಾಡಲು ಅನುಕೂಲವಾಗಲಿದೆ. ಅಲ್ಲದೆ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗೆ ಸಹಕಾರಿಯಾಗಲಿದೆ ಎಂದರು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾತನಾಡಿ, ಈ ಅವ ಧಿಯಲ್ಲಿ ಪ್ರತಿ ವರ್ಷಕ್ಕಿಂತ ಹೆಚ್ಚಿನ ನೀರು ತುಂಬಿರುವುದು ರೈತರಲ್ಲಿ ಹರ್ಷ ಮೂಡಿಸಿದೆ.

ಇದರಿಂದಾಗಿ ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಅಚ್ಚುಕಟ್ಟು ಪ್ರದೇಶದ ಕೊನೆಯ ರೈತರ ಹೊಲಗಳಿಗೆ ನೀರು ಹರಿಯುವ ವಿಶ್ವಾಸ ತಮಗಿರುವುದಾಗಿ ತಿಳಿಸಿದರು. ಜಲಾಶಯದ ಪಾತ್ರದಲ್ಲಿ ಕಾಮಗಾರಿ ಕಳಪೆಯಾಗಿರುವ ಮಾಹಿತಿ ಇರುವ ಬಗ್ಗೆ ತಜ್ಞರಿಂದ ಮಾಹಿತಿ ಪಡೆದುಕೊಂಡಿದ್ದು, ಇದರಿಂದಾಗಿ ರೈತರಿಗೆ ಯಾವುದೇ ಹಾನಿಯಾಗುವುದಿಲ್ಲ. ಇದರಿಂದಾಗಿ ರೈತರು ಆತಂಕಪಡುವ ಅಗತ್ಯವಿಲ್ಲ ಎಂದ ಅವರು, ಈ ಸಂಬಂಧ ಮೂವರು ತಜ್ಞರ ಸಮಿತಿಯೊಂದನ್ನು ರಚಿಸಿದ್ದು, ಶೀಘ್ರದಲ್ಲಿ ವರದಿ ದೊರೆಯಲಿದೆ. ನಂತರ ಕ್ರಮ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಅಧಿ  ಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.

Advertisement

ನಿರೀಕ್ಷೆಯಂತೆ ಜಲಾಶಯ ತುಂಬಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರು ತಮ್ಮ ಅಪೇಕ್ಷೆಯ ಬೆಳೆ ಬೆಳೆಯಲು ಆಕ್ಷೇಪಣೆ ಇಲ್ಲ. ಈ ಬಗ್ಗೆ ಯಾವುದೇ ನಿರ್ಬಂಧ ವಿ ಧಿಸುವುದನ್ನು ನಾವು ವಿರೋ ಧಿಸುವುದಾಗಿ ತಿಳಿಸಿದರು. ಗ್ರಾಪಂ ಅಧ್ಯಕ್ಷರು, ಸದಸ್ಯರು, ಇಂಜಿನಿಯರರು, ಸ್ಥಳೀಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next