Advertisement

ಶಿವಮೊಗ್ಗದಲ್ಲಿ ಭಾರಿ ಕಂಪನ: ಭದ್ರಾ ಜಲಾಶಯದ ಸ್ಥಿತಿಗತಿ ಪರಿಶೀಲಿಸಿದ ಪ್ರಾಧಿಕಾರದ ಅಧ್ಯಕ್ಷೆ

01:13 AM Jan 22, 2021 | Team Udayavani |

ಶಿವಮೊಗ್ಗ : ಗುರುವಾರ ರಾತ್ರಿ ಸುಮಾರು 10.20ರ ಸಮಯದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಉಂಟಾದ ಬಾರಿ ಕಂಪನದ ಹಿನ್ನಲೆಯಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು  ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ತೆರಳಿ ಭದ್ರಾ ಜಲಾಶಯವನ್ನು ವೀಕ್ಷಣೆ ಮಾಡಿ ಜಲಾಶಯದ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.

Advertisement

ಭದ್ರಾ ಕಾಡ ಪ್ರಾಧಿಕಾರವು ಸುಮಾರು 12ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದ್ದು, ಭದ್ರಾ ಜಲಾಶಯವು ಸುಮಾರು 5ಲಕ್ಷ ಹೆಕ್ಟೇರ್ ಭೂ ಪ್ರದೇಶಕ್ಕೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯಾಜನೆಯಾಗಿರುತ್ತದೆ. ಲಕ್ಷಾಂತರ ರೈತರಿಗೆ ಭದ್ರಾ ಜಲಾಶಯವು ಜೀವನಾಡಿಯಾಗಿದ್ದು ಅಚ್ಚುಕಟ್ಟು ಭಾಗದ ರೈತರು ಇದನ್ನೇ ನಂಬಿ ಬದುಕುತ್ತಿದ್ದಾರೆ.

ಇದನ್ನೂ ಓದಿ:ಕಲ್ಲು ಗಣಿಗಾರಿಕೆಯಲ್ಲಿ ಡೈನಾಮೈಟ್ ಸ್ಫೋಟ 7ಕ್ಕೂ ಹೆಚ್ಚು ಕಾರ್ಮಿಕರು ಬಲಿ

ಭೂ ಕಂಪನದಿಂದ ಯಾವುದೇ ರೀತಿಯಲ್ಲಿ ಜಲಾಶಯಕ್ಕೆ ತೊಂದರೆಯಾಗುವುದಿಲ್ಲ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next