Advertisement

ಅಸ್ವಸ್ಥಗೊಂಡು ಕುಸಿದು ಬಿದ್ದ ವೃದ್ಧೆಯ ಮನೆಗೇ ತೆರಳಿ ಪಿಂಚಣಿ ಪತ್ರ ಹಸ್ತಾಂತರಿಸಿದ ಅಧಿಕಾರಿ

06:45 PM Jun 21, 2022 | Team Udayavani |

ಶಿವಮೊಗ್ಗ: ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತೆರಳಿ ತಹಶೀಲ್ದಾರ್ ವಿ.ಎಸ್.ರಾಜೀವ್ ಅವರು ಪಿಂಚಣಿಯ ಮಂಜೂರಾತಿ ಪತ್ರವನ್ನು ಮಂಗಳವಾರ ಹಸ್ತಾಂತರಿಸಿದರು.

Advertisement

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಸೂಚನೆಯಂತೆ ಫಲಾನುಭವಿಯ ಮನೆಗೆ ತೆರಳಿದ ತಹಶೀಲ್ದಾರ್ ಅವರು ಪತ್ರವನ್ನು ಹಸ್ತಾಂತರಿಸಿ ಆರೋಗ್ಯವನ್ನು ವಿಚಾರಿಸಿದರು. ಸಾಮಾಜಿಕ ಭದ್ರತಾ ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡುವವರ ವಿರುದ್ಧ ಕ್ರಮವನ್ನು ಜರುಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

ಸಂಬಂಧಪಟ್ಟ ನಿಟ್ಟೂರು ಗ್ರಾಮ ಲೆಕ್ಕಾಧಿಕಾರಿಗೆ ಈಗಾಗಲೇ ನೊಟೀಸ್ ಜಾರಿಗೊಳಿಸಲಾಗಿದ್ದು, ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ತಿಳಿಸಿದ್ದಾರೆ.

ಇದನ್ನೂ ಓದಿ : ಸರ್ಕಾರಿ ಶಾಲೆಗಳ ಮೂಲಭೂತ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಸಿದ್ದು ಸವದಿ

Advertisement

Udayavani is now on Telegram. Click here to join our channel and stay updated with the latest news.

Next