Advertisement
ಅಸ್ಲಂ ಎಂಬಾತನ ಎಡಗಾಲಿಗೆ ಗುಂಡು ಹಾರಿಸಲಾಗಿದೆ. ಪುರಲೆ ರಸ್ತೆಯಲ್ಲಿ ನಿರ್ಮಾಣವಾಗಿರುವ ಬಡಾವಣೆಯೊಂದರಲ್ಲಿ ಅಸ್ಲಂ ಅವಿತುಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆ ಪೊಲೀಸರು ಆತನ ಬಂಧನಕ್ಕೆ ತೆರಳಿದ್ದರು.
Related Articles
Advertisement
ಪರಾರಿಯಾಗಲು ಯತ್ನಿಸಿದ ಅಸ್ಲಂಗೆ ಪಿಎಸ್ಐ ವಸಂತ್ ಅವರು ಎಚ್ಚರಿಕೆ ನೀಡಿದ್ದಾರೆ ಆದರೂ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಈ ವೇಳೆ ಪೊಲೀಸರು ಗುಂಡು ಹಾರಿಸಿದ್ದಾರೆ. ಅಸ್ಲಂನ ಎಡಗಾಲಿಗೆ ಗುಂಡು ತಾಗಿದ್ದು, ಆತ ಗಾಯಗೊಂಡಿದ್ದಾನೆ. ಕೂಡಲೆ ಪೊಲೀಸ್ ಸಿಬ್ಬಂದಿ ರಮೇಶ್ ಮತ್ತು ಆರೋಪಿ ಅಸ್ಲಂನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರಿಗೂ ಚಿಕಿತ್ಸೆ ನೀಡಲಾಗಿದೆ. ಪೊಲೀಸ್ ಸಿಬ್ಬಂದಿ ರಮೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಸ್ಲಂಗೆ ಅಪರಾಧ ಹಿನ್ನೆಲೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣಗಳು ದಾಖಲಾಗಿವೆ.
ಅಸ್ಲಂ ಬಂಧನಕ್ಕೆ ಹೋಗಿದ್ದೇಕೆ?
ಆ.30ರಂದು ರಾತ್ರಿ ಬಿ.ಹೆಚ್.ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ಅಶೋಕ್ ಪ್ರಭು ಎಂಬಾತನ ಜೊತೆಗೆ ನಾಲ್ವರು ಕ್ಷುಲಕ ವಿಚಾರಕ್ಕೆ ಜಗಳವಾಡಿದ್ದರು. ಹರಿತವಾದ ಆಯುಧದಿಂದ ಅಶೋಕ್ ಪ್ರಭು ಎಡಗಲ್ಲದ ಮೇಲೆ ಹಲ್ಲೆ ಮಾಡಿದ್ದರು. ಗಾಯಗೊಂಡಿದ್ದ ಅಶೋಕ್ ಪ್ರಭು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಪ್ರಕರಣ ಸಂಬಂಧ ಸಾಗರದ ಆಸೀಫ್ ಅಲಿಯಾಸ್ ಚೆಲ್ಲಿ (26) ಎಂಬಾತನ್ನು ಶುಕ್ರವಾರ ಬಂಧಿಸಲಾಗಿತ್ತು. ಮತ್ತೊಬ್ಬ ಆರೋಪಿ ಅಸ್ಲಂ ಎಂಬಾತ ಪುರಲೆ ರಸ್ತೆಯಲ್ಲಿ ಬಡಾವಣೆಯಲ್ಲಿ ಅಡಗಿರುವ ಖಚಿತ ಮಾಹಿತಿ ಲಭ್ಯವಾಗಿತ್ತು.
ಇದನ್ನೂ ಓದಿ : “ಹುವೈ ಪಾಕೆಟ್ ಎಸ್’ ಬಿಡುಗಡೆ; ನ.10ರಿಂದ ಮಾರುಕಟ್ಟೆಯಲ್ಲಿ ಲಭ್ಯ