Advertisement
ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕವಿತಾ ಜ. 1ರಂದು ದಾಖಲಾಗಿದ್ದರು. ಶುಕ್ರವಾರ ಬೆಳಗಿನ ಜಾವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ತೀವ್ರ ರಕ್ತಸ್ರಾವಕ್ಕೊಳಗಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಬಾಣಂತಿ ಸಾವಿನ ಬಗ್ಗೆ ಕುಟುಂಬಸ್ಥರು ದೂರು ನೀಡಿಲ್ಲ. ಸಾವಿನ ಕುರಿತು ಸಮಿತಿ ತನಿಖೆ ನಡೆಸಿ ವರದಿ ನೀಡಲಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಈ ವರ್ಷದ ನವೆಂಬರ್ವರೆಗೆ 348 ಬಾಣಂತಿಯರ ಸಾವು ಸಂಭವಿಸಿದೆ. ಆಗಸ್ಟ್ನಿಂದ ನವೆಂಬರ್ವರೆಗೆ ಕೇವಲ ನಾಲ್ಕು ತಿಂಗಳಲ್ಲಿ 217 ಬಾಣಂತಿಯರು ಮೃತಪಟ್ಟಿದ್ದಾರೆ. ಇದರಲ್ಲಿ 179 ಮರಣ ಪ್ರಕರಣಗಳು ಸರಕಾರಿ ಆಸ್ಪತ್ರೆಗಳಲ್ಲಿ ಮತ್ತು 38 ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸಿವೆ