Advertisement

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

01:37 AM Jan 05, 2025 | Esha Prasanna |

ಶಿವಮೊಗ್ಗ: ಮಗು ಜನಿಸಿದ ಕೆಲವೇ ಗಂಟೆಗಳಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಂಭವಿಸಿದೆ.

Advertisement

ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕವಿತಾ ಜ. 1ರಂದು ದಾಖಲಾಗಿದ್ದರು. ಶುಕ್ರವಾರ ಬೆಳಗಿನ ಜಾವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ತೀವ್ರ ರಕ್ತಸ್ರಾವಕ್ಕೊಳಗಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಬಾಣಂತಿ ಸಾವಿನ ಬಗ್ಗೆ ಕುಟುಂಬಸ್ಥರು ದೂರು ನೀಡಿಲ್ಲ. ಸಾವಿನ ಕುರಿತು ಸಮಿತಿ ತನಿಖೆ ನಡೆಸಿ ವರದಿ ನೀಡಲಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಾದ್ಯಂತ ಬಾಣಂತಿಯರ ಸರಣಿ ಸಾವುಗಳು ಸಂಭವಿಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಶನಿವಾರ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಬಡ ಕುಟುಂಬಗಳ ಬಾಣಂತಿಯರು ಮತ್ತು ನವಜಾತ ಶಿಶುಗಳ ಸಾವು ನಿರಂತರ ಸಂಭವಿಸುತ್ತಿದ್ದರೂ ಕಾಂಗ್ರೆಸ್ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

4 ತಿಂಗಳಲ್ಲಿ 217 ಬಾಣಂತಿಯರ ಸಾವು
ರಾಜ್ಯದಲ್ಲಿ ಈ ವರ್ಷದ ನವೆಂಬರ್‌ವರೆಗೆ 348 ಬಾಣಂತಿಯರ ಸಾವು ಸಂಭವಿಸಿದೆ. ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೇವಲ ನಾಲ್ಕು ತಿಂಗಳಲ್ಲಿ 217 ಬಾಣಂತಿಯರು ಮೃತಪಟ್ಟಿದ್ದಾರೆ. ಇದರಲ್ಲಿ 179 ಮರಣ ಪ್ರಕರಣಗಳು ಸರಕಾರಿ ಆಸ್ಪತ್ರೆಗಳಲ್ಲಿ ಮತ್ತು 38 ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸಿವೆ

Advertisement

Udayavani is now on Telegram. Click here to join our channel and stay updated with the latest news.

Next