Advertisement

ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ

11:22 AM Jul 21, 2019 | Naveen |

ಶಿವಮೊಗ್ಗ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರ ಬಂಧನ ಖಂಡಿಸಿ ಶನಿವಾರ ಬೆಳಗ್ಗೆ ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರತಿಭಟನಾ ಮೆರವಣಿಗೆ ನಡೆಸಿತು.

Advertisement

ಪ್ರಿಯಾಂಕಾ ಗಾಂಧಿ ಅವರ ಬಂಧನ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಕಾಂಗ್ರೆಸ್‌ ಭವನದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಹೊರಟು ಮಹಾವೀರ ಸರ್ಕಲ್ನಲ್ಲಿ ಮಾನವ ಸರಪಳಿ ರಚನೆ ಮಾಡಿ ಘಟನೆ ಖಂಡಿಸಿದರು.

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಬಡವರ ಪರವಾಗಿ ನ್ಯಾಯ ಕೇಳಲು ಹೋಗಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಅಲ್ಲಿನ ಪೊಲೀಸರು ಬಿಜೆಪಿ ಸರ್ಕಾರದ ಕುಮ್ಮಕ್ಕಿನಿಂದ ಬಂಧಿಸಿದ್ದಾರೆ. ಇದು ಅತ್ಯಂತ ಖಂಡನೀಯ. ಬಿಜೆಪಿಯ ಯೋಗಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ದೂರಿದರು.

ಉತ್ತರ ಪ್ರದೇಶದಲ್ಲಿ ಭೂ ವಿವಾದದಲ್ಲಿ 10 ಬಡ ರೈತರನ್ನು ಒಕ್ಕಲೆಬ್ಬಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ನ್ಯಾಯ ಕೇಳಲು ಹೊರಟಿದ್ದಾಗ ಅದಕ್ಕೆ ಅವಕಾಶ ನೀಡಲಿಲ್ಲ. ಇದು ಅಸಂವಿಧಾನಿಕವಾಗಿದೆ. ಬಡವರ ಪರವಾಗಿ ನ್ಯಾಯ ಕೇಳಲು ಹೋದರೆ ಬಂಧಿಸುವ ಪರಿ ಪ್ರಜಾಪ್ರಭುತ್ವದಲ್ಲಿ ಎಷ್ಟರಮಟ್ಟಿಗೆ ಸರಿ ಎಂದು ಪ್ರತಿಭಟನಾಕಾರರು ಪ್ರಶ್ನೆ ಮಾಡಿದರು.

ಪ್ರಜಾಪ್ರಭುತ್ವದ ಮೌಲ್ಯ ದಮನಗೊಳಿಸಲು ಪ್ರಯತ್ನಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿನಾಥ್‌ ಅವರ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಈ ಬಗ್ಗೆ ತನಿಖೆಯಾಗಬೇಕೆಂದು ಒತ್ತಾಯಿಸಿದರು.

Advertisement

ಪ್ರತಿಭಟನೆಯಲ್ಲಿ ಎಲ್. ಸತ್ಯನಾರಾಯಣ್‌ ರಾವ್‌, ಎಲ್. ರಾಮೇಗೌಡ, ರಮೇಶ್‌ ಹೆಗ್ಡೆ, ವೈ.ಎಚ್. ನಾಗರಾಜ್‌, ಸತ್ಯನಾರಾಯಣ್‌ ಆರ್‌, ಚಂದ್ರಭೂಪಾಲ್, ಹುಲ್ತಿಕೊಪ್ಪ ಶ್ರೀಧರ್‌, ಡಾ| ಶ್ರೀನಿವಾಸ್‌, ಎಸ್‌.ಪಿ. ದಿನೇಶ್‌, ವಿಜಯಲಕ್ಷ್ಮಿ ಸಿ.ಪಾಟೀಲ್, ವಿಶ್ವನಾಥ್‌ ಕಾಶಿ, ನಾಗರಾಜ್‌, ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next