Advertisement

ಶಿವಮೊಗ್ಗ: ಇಂದಿನಿಂದ ಶಾಲಾ-ಕಾಲೇಜು ಪುನಾರಂಭ

10:43 PM Feb 27, 2022 | Team Udayavani |

ಶಿವಮೊಗ್ಗ: ಹಿಜಾಬ್‌ ವಿವಾದ, ಕರ್ಫ್ಯೂ ಹಿನ್ನೆಲೆಯಲ್ಲಿ 15 ದಿನದಿಂದ ಶಿವಮೊಗ್ಗ ನಗರದಲ್ಲಿ ಬಂದ್‌ ಆಗಿದ್ದ ಶಾಲಾ-ಕಾಲೇಜುಗಳು ಸೋಮವಾರದಿಂದ ಆರಂಭ ಗೊಳ್ಳಲಿದೆ.

Advertisement

ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ಕೆಲ ಕಾಲೇಜುಗಳಲ್ಲಿ ಕಲ್ಲು ತೂರಾಟ, ಭಗವಾಧ್ವಜ ಹಾರಾಟ ವಿವಾದ ನಡೆದಿತ್ತು. ಹಲವೆಡೆ ಘರ್ಷಣೆಗಳು ಕೂಡ ನಡೆದಿದ್ದವು.

ವಿದ್ಯಾರ್ಥಿನಿಯರು ಹಿಜಾಬ್‌ಗ ಅವಕಾಶ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನೆ ಕೂಡ ನಡೆಸಿದ್ದರು. ಇದರಿಂದ ಶಿಕ್ಷಣ ಸಂಸ್ಥೆಗಳಲ್ಲಿ ಶಾಂತಿಭಂಗವಾಗಿತ್ತು. ಇದನ್ನು ಹತೋಟಿಗೆ ತರಲು ಕೆಲ ದಿನ ಶಾಲೆಗಳಿಗೆ ರಜೆ ನೀಡಿ, ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.

ಅನಂತರ ಶಾಲೆಗಳು ಆರಂಭ ಗೊಂಡ ಎರಡೇ ದಿನಕ್ಕೆ ಅಂದರೆ ಫೆ. 20ರಂದು ನಗರದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ನಡೆದು, ನಗರದಲ್ಲಿ ಶಾಂತಿ ಭಂಗಕ್ಕೆ ಕಾರಣವಾಗಿತ್ತು. ಕಲ್ಲು ತೂರಾಟ, ಕಟ್ಟಡ, ವಾಹನಗಳಿಗೆ ಬೆಂಕಿ ಹಚ್ಚಿದ ಪರಿಣಾಮ ನಿಷೇಧಾಜ್ಞೆ ಜತೆ ಕರ್ಫ್ಯೂ ವಿ ಧಿಸಲಾಯಿತು. ಈ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಶನಿವಾರ ಶಾಲೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತಾದರೂ, ಕೊನೇ ಕ್ಷಣದಲ್ಲಿ ನಿರ್ಧಾರ ವಾಪಸ್‌ ಪಡೆದು ಸೋಮವಾರದಿಂದ ಆರಂಭಕ್ಕೆ ನಿರ್ಧಾರ ಮಾಡಲಾಗಿದೆ. ಕರ್ಫ್ಯೂ ವಿಧಿಸಿದ ಪರಿಣಾಮ ನಗರದಲ್ಲಿ ಕಳೆ ಮಂಗಳವಾರದ ಅನಂತರ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

Advertisement

ಇದನ್ನೂ ಓದಿ:ಶಿವಮೊಗ್ಗ ಶಾಂತ ಸ್ಥಿತಿಯತ್ತ ಬರುತ್ತಿದೆ: ಸಂಸದ ಬಿ.ವೈ. ರಾಘವೇಂದ್ರ

ಸಹಜ ಸ್ಥಿತಿಯತ್ತ ನಗರ
ಹಿಂದೂಪರ ಕಾರ್ಯಕರ್ತ ಹರ್ಷ ಸಾವಿನ ಬಳಿಕ ಪ್ರಕ್ಷುದ್ಧ ವಾತಾವರಣ ನಿರ್ಮಾಣವಾಗಿದ್ದ ಶಿವಮೊಗ್ಗ ನಗರ ಇದೀಗ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಮುಂಜಾಗ್ರತ ಕ್ರಮವಾಗಿ ಸೋಮವಾರ ಬೆಳಗ್ಗಿನವರೆಗೆ ಶಿವ ಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ವಿಧಿ ಸಲಾಗಿತ್ತು. ನಿಷೇಧಾಜ್ಞೆ ನಡುವೆಯೂ ಶನಿವಾರದಿಂದ ಶಿವಮೊಗ್ಗ ನಗರದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿ ಪರಿಸ್ಥಿತಿ ಅವಲೋಕನ ನಡೆಸಲಾಗಿದೆ. ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿದರೂ ಯಾವುದೇ ಗೊಂದಲ ನಿರ್ಮಾಣವಾಗಿಲ್ಲ. ಆದರೂ ಮಾ. 4ರ ವರೆಗೆ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳು ವಿಸ್ತರಿಸಿದ್ದಾರೆ.

ಬಿಗಿ ಬಂದೋಬಸ್ತ್
ವಾತಾವರಣ ಸಾಮಾನ್ಯ ಸ್ಥಿತಿಗೆ ಮರಳಿದ್ದರೂ ಮುಂಜಾಗ್ರತ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್ ಮುಂದುವರಿಸಲಾಗಿದೆ.

ಮಾ. 4ರವರೆಗೆ ನಿಷೇಧಾಜ್ಞೆ ವಿಸ್ತರಣೆ
ಶಿವಮೊಗ್ಗ: ನಗರದಲ್ಲಿ ಸೋಮವಾರದವರೆಗೂ ಇದ್ದ ನಿಷೇಧಾಜ್ಞೆಯನ್ನು ಮಾ. 4ರವರೆಗೂ ವಿಸ್ತರಿಸಿ ಜಿಲ್ಲಾ ಧಿಕಾರಿ ಡಾ| ಸೆಲ್ವಮಣಿ ಆದೇಶಿಸಿದ್ದಾರೆ. ಈ ಅವ ಧಿಯಲ್ಲಿ ಬೆಳಗ್ಗೆ 6ರಿಂದ ಸಂಜೆ 7ರವರೆಗೆ ವ್ಯಾಪಾರ- ವಹಿವಾಟಿಗೆ ಅವಕಾಶ ನೀಡಲಾಗಿದೆ. ಸಂಜೆ 7ರಿಂದ ಬೆಳಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next