Advertisement

ಬೆಂಗಳೂರಿಗೆ ನೀರು ಹರಿಸಲು ವಿರೋಧ

11:51 AM Jul 04, 2019 | Team Udayavani |

ಶಿವಮೊಗ್ಗ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವುದಕ್ಕೆ ವಿರೋಧ ಮುಂದುವರಿದಿದ್ದು ಬುಧವಾರ ಕೂಡ ಹಲವು ಸಂಘಟನೆಗಳ ವತಿಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

Advertisement

ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವುದಕ್ಕೆ ವಿರೋಧಿಸಿ ಕೋಟೆ ಯುವಕ ಸಂಘ ಮತ್ತು ಕಲಾಜ್ಯೋತಿ ಸಂಘದ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷರಾದ ಮಂಜುನಾಥ್‌, ದೀನದಯಾಳು, ಬಾಲಚಂದ್ರ, ಚೇತನ್‌, ಸತ್ಯನಾರಾಯಣ, ರೇಣುಕಪ್ಪ ಮತ್ತಿತರರು ಇದ್ದರು.

ಸಿಹಿಮೊಗ್ಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವುದಕ್ಕೆ ವಿರೋಧಿಸಿ ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ಬೆಂಗಳೂರಿಗೆ ಶರಾವತಿ ನೀರನ್ನು ಹರಿಸಬಾರದು ಎಂದು ಒತ್ತಾಯಿಸಿದರು. ಜೋಗದಿಂದ ಸುಮಾರು 400 ಕಿಮೀ ದೂರದ ಬೆಂಗಳೂರಿಗೆ ನೀರು ಪೂರೈಕೆ ಮಾಡಲು ಮುಂದಾದರೆ ಅರಣ್ಯ ಭೂಮಿ, ಸಂಪನ್ಮೂಲ ನಾಶವಾಗಿ ಪರಿಸರ ಅಸಮತೋಲನಕ್ಕೆ ಕಾರಣವಾಗುತ್ತದೆ ಎಂದರು. ಲಿಂಗನಮಕ್ಕಿ ಮತ್ತು ಇತರೆ ಅಣೆಕಟ್ಟುಗಳ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ಕುಟುಂಬಗಳಿಗೆ ಪುನರ್ವಸತಿ ಕಾರ್ಯ ಆಗಿಲ್ಲ. ಈಗ ಶರಾವತಿಯನ್ನೇ ಕಬಳಿಸಲು ಹೊರಟಿರುವ ಪ್ರಸ್ತಾವನೆ ಸ್ಥಳೀಯ ಜನಸಮುದಾಯದ ಹಿತಕ್ಕೆ ವಿರುದ್ಧವಾಗಿದೆ ಎಂದರು.

ಈ ಪ್ರದೇಶದ ಜನಸಮುದಾಯಕ್ಕೆ ಮೂಲ ಸೌಕರ್ಯ ದೊರೆತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿಗೆ ಶರಾವತಿ ನದಿ ನೀರು ಸರಬರಾಜು ಯೋಜನೆ ಅವೈಜ್ಞಾನಿಕವಾಗಿದೆ. ಈ ಯೋಜನೆಯನ್ನು ಕೈಗೆತ್ತಿಕೊಳ್ಳಬಾರದು ಎಂದು ಆಗ್ರಹಿಸಿದರು.

Advertisement

ಸಂಘದ ಅಧ್ಯಕ್ಷ ಪಿ.ಒ. ಶಿವಕುಮಾರ್, ಟಿ.ಜೆ. ರವಿಕುಮಾರ್, ಎಸ್‌.ಸಿ. ಮಂಜಪ್ಪ ಮತ್ತಿತರರು ಇದ್ದರು.

ಅನುದಾನ ರಹಿತ ಶಿಕ್ಷಣ ಶಿಕ್ಷಕರ ಸಂಘ: ಲಿಂಗನಮಕ್ಕಿ ಜಲಾಶಯದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸಲು ಹುನ್ನಾರ ನಡೆಸುತ್ತಿರುವುದು ಸರಿಯಲ್ಲ. ಈ ಯೋಜನೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ದೂರಿದರು. ಜಿಲ್ಲೆಯ ಎಲ್ಲ ಗ್ರಾಮಗಳಿಗೆ ನೀರಿನ ಬವಣೆ ನೀಗಿಸುವ ಮೂಲಕ ಜಿಲ್ಲೆಯ ಜನತೆಗೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಪದಾಕಾರಿಗಳು ಇದ್ದರು.

ಖಾಸಗಿ ಬಸ್‌ ಏಜೆಂಟರ ಸಂಘ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸಲು ಮುಂದಾಗಿರುವುದನ್ನು ವಿರೋಧಿಸಿ ಖಾಸಗಿ ಬಸ್‌ ಏಜೆಂಟರ ಸಂಘದಿಂದ ಶಿವಮೊಗ್ಗ ಮತ್ತು ಸಾಗರದಲ್ಲಿ ಪತ್ರ ಚಳವಳಿ ನಡೆಸಲಾಯಿತು. ಬೆಂಗಳೂರಿಗೆ ತೆರಳುವ ಬಸ್‌ಗಳಲ್ಲಿ ಶರಾವತಿ ಉಳಿಸಿ ಸಂದೇಶದ ಬ್ಯಾನರ್‌ ಹಾಕಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next