Advertisement
ಅವರು ಮಂಗಳವಾರ ಮಾಚೇನಹಳ್ಳಿ ಕೆಎಸ್ ಆರ್‌ಪಿ-8 ಬಟಾಲಿಯನ್‌ಗೆ ಭೇಟಿ ನೀಡಿ ಅಧಿ ಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ರಾಜ್ಯದಲ್ಲಿ ನಡೆಯುತ್ತಿರುವ ಮಾದಕ ದ್ರವ್ಯ ಸಾಗಾಟ ಮತ್ತು ಅಕ್ರಮ ಮಾರಾಟ ತಡೆಗೆ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇಂತಹ ದುಷ್ಕೃತ್ಯದಲ್ಲಿ ಭಾಗಿಯಾಗುವ ಯಾರೇ ಆದರೂ ದಂಡನೆಗೆ ಗುರಿಪಡಿಸಲಾಗುವುದು. ಇದರ ತಡೆಗಾಗಿಯೇ ಇಲಾಖೆಯಲ್ಲಿ ಪ್ರತ್ಯೇಕ ತಂಡ ರಚಿಸಲಾಗಿದೆ.
Related Articles
Advertisement
ಸಹಾಯವಾಣಿಗೆ ಮತ್ತಷ್ಟು ಸೌಲಭ್ಯ: ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ರಕ್ಷಣೆ ಬಗ್ಗೆ ವಿಶೇಷ ಕ್ರಮ ವಹಿಸಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಪರಿಶೀಲಿಸಿ ಇಲಾಖೆಯ ನ್ಯೂನತೆಗಳನ್ನು ಅರಿತು ಸರಿಪಡಿಸಲು ಯತ್ನಿಸಲಾಗುವುದು. ಅಲ್ಲದೇ ಪೊಲೀಸ್ ಬಲವನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ನೆಮ್ಮದಿಯ ಬದುಕಿಗೆ ಅನುಕೂಲವಾಗುವಂತೆ 112 ಸಹಾಯವಾಣಿ ಕೇಂದ್ರ ಆರಂಭಿಸಿದ್ದು, ಈ ಕೇಂದ್ರವನ್ನು ಅತ್ಯಾಧುನಿಕ ರೀತಿಯಲ್ಲಿ ಇನ್ನಷ್ಟು ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಹೊಸ ವಾಹನಗಳನ್ನು ಖರೀದಿಸಲು ಹಾಗೂ ಸಿಬ್ಬಂದಿ ನಿಯೋಜಿಸಲು ಗಮನಹರಿಸಲಾಗುವುದು. ಅತ್ಯಲ್ಪ ಅವ ಧಿಯಲ್ಲಿ ನೊಂದ ನಾಗರಿಕರನ್ನು ರಕ್ಷಿಸಲು ಹಾಗೂ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಈ ಪಡೆ ಕಾರ್ಯಪ್ರವೃತ್ತವಾಗಲಿದೆ ಎಂದರು.
ಎಲ್ಲಾ ನಗರಗಳ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಇಲಾಖೆಯಿಂದ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಂತೆಯೇ ಖಾಸಗಿ ಸಂಘ-ಸಂಸ್ಥೆಗಳವರು, ಉದ್ದಿಮೆದಾರರು ಸಹ ಕ್ಯಾಮೆರಾ ಅಳವಡಿಸಿಕೊಳ್ಳಲು ಸೂಚಿಸಲಾಗಿದೆ. ಈ ಕ್ಯಾಮೆರಾಗಳ ಚಿತ್ರಿತ ಭಾಗವನ್ನು ಪೊಲೀಸ್ ಇಲಾಖೆಯ ಅಗತ್ಯಗಳಿಗೆ ಒದಗಿಸುವಂತೆಯೂ ಸೂಚಿಸಲಾಗಿದೆ ಎಂದರು. ಕನ್ನಡಿಗರ ರಕ್ಷಣೆಗೆ ಬದ್ಧ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಗುರುತಿಸಿ ಸುರಕ್ಷಿತವಾಗಿ ಕರೆತರಲು ಹಿರಿಯ ಪೊಲೀಸ್ ಅ ಧಿಕಾರಿ ಉಮೇಶ್‌ಕುಮಾರ್ ಅವರನ್ನು ನೇಮಿಸಲಾಗಿದೆ.
ಅವರು ಕೇಂದ್ರ ರಕ್ಷಣಾ ಇಲಾಖೆಯೊಂದಿಗೆ ಸಂಪರ್ಕ ಸಾಧಿ ಸಿ, ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಪ್ರಯತ್ನ ಮುಂದುವರೆಯಲಿದೆ. ಈಗಾಗಲೇ ರಾಜ್ಯದ ಒಂಬತ್ತು ಜನರನ್ನು ತಾಯ್ನಾಡಿಗೆ ಕರೆತರಲಾಗಿದೆ ಎಂದರು. ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಾಸಕ ಕೆ.ಬಿ.ಅಶೋಕ್ ನಾಯ್ಕ ಇನ್ನಿತರರು ಉಪಸ್ಥಿತರಿದ್ದರು.