Advertisement
ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಜನ, ವಾಹನ ಸಂಚಾರ ಎಂದಿನಂತೆಯೇ ಇದೆ. ನಗರದ ಸೂಕ್ಷ್ಮಪ್ರದೇಶಗಳು ಸೇರಿದಂತೆ ಎಲ್ಲ ಕಡೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆಲೋಕ್ ಕುಮಾರ್, ಪೂರ್ವ ವಲಯ ಐಜಿಪಿ ತ್ಯಾಗರಾಜ್, ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಪ್ರಸಾದ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಗಾಂಧಿ ಬಜಾರ್, ನೆಹರೂ ರಸ್ತೆ, ಎಂ.ಕೆ.ಕೆ. ರಸ್ತೆ ಮೊದಲಾದ ಕಡೆಗಳಲ್ಲಿ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಆರ್.ಎ.ಎಫ್., ಕೆಎಸ್‌ಆರ್‌ಪಿ, ಡಿಎಆರ್ ಸೇರಿದಂತೆ ಭಾರೀ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಅಮೀರ್ ಅಹಮ್ಮದ್ ಸರ್ಕಲ್ ಗಲಭೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಐದು ಎಫ್‌ಐಆರ್ ದಾಖಲಾಗಿದೆ. ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸದಂತೆ ತಿಳಿವಳಿಕೆ ನೀಡಿದರೂ ಸರ್ಕಲ್ ಮಧ್ಯೆ ಇದ್ದ ಫ್ಲೆಕ್ಸ್ ಕಿತ್ತು ಹಾಕಿದ ನಾಲ್ಕು ಯುವಕರ ಮೇಲೆ ಹಾಗೂ ಫ್ಲೆಕ್ಸ್ ಹಾಕಿದ 10 ಜನರ ವಿರುದ್ಧವೂ ಪೊಲೀಸರು ದೂರು ದಾಖಲಿಸಿದ್ದಾರೆ. ಮೊಹಮ್ಮದ್ ಜಬೀವುಲ್ಲಾ ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾದ ವಿಚಾರಕ್ಕೆ ಸಂಬಂಧಿಸಿ ಒಂದು ದೂರು ದಾಖಲಾಗಿದೆ. 19 ವರ್ಷದ ಸದ್ದಾಂಹುಸೇನ್ ಮೇಲೆ ಸೋಮವಾರ ಮಧ್ಯಾಹ್ನ ಗಾಂಧಿಬಜಾರ್‌ನ ಉಪ್ಪಾರಕೇರಿ ಕ್ರಾಸ್ ಬಳಿ ಹಲ್ಲೆ ನಡೆಸಿದ ಆರೋಪದ ಮೇಲೆ ದೂರು ದಾಖಲಾಗಿದೆ. ಪ್ರೇಮ್‌ಸಿಂಗ್ ಮೇಲೆ ಹಲ್ಲೆ ನಡೆಸಿದ ವಿಚಾರಕ್ಕೆ ಒಂದು ದೂರು, 17 ವರ್ಷದ ಬಾಲಕನ ಮೇಲೆ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂ ಧಿಸಿದಂತೆ ಮತ್ತೊಂದು ದೂರು ದಾಖಲಾಗಿದೆ. ಫ್ಲೆಕ್ಸ್ ಪ್ರಕರಣ ಹಾಗೂ ಮುಸ್ಲಿಂ ಯುವಕರ ಮೇಲಿನ ಹಲ್ಲೆ ವಿಚಾರದಲ್ಲಿ ಈವರೆಗೆ ಪೊಲೀಸರು ಯಾರನ್ನೂ ಬಂ ಧಿಸಿಲ್ಲ