Advertisement
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿನ ನನ್ನ ಮಾತನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ. ಚುನಾವಣೆ ಗೆಲ್ಲುವ ಕುರಿತು ಪಕ್ಷ ಬಿಜೆಪಿ ಹೊಸ ನಾಯಕರಿಗೆ ನೀಡಿರುವ ಗುರಿ ಗೆಲ್ಲುವುದಕ್ಕಾಗಿ ನನ್ನ ಹೇಳಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು.
Related Articles
Advertisement
ಕೊಬ್ಬರಿ ಮೌಲ್ಯವರ್ಧನೆ ಮಾಡಿ ಜನರಿಗೆ ಹಂಚುವ ಬದಲು ನಮ್ಮ ರಾಜ್ಯದವರೇ ಒಬ್ಬರು ಕೊಬ್ಬರಿ ಬೆಲೆ ಕುಸಿದಿದೆ ಎಂದು ಕೇಂದ್ರಕ್ಕೆ ಮನವಿ ಕೊಡುತ್ತಿದ್ದಾರೆ. ಮತ್ತೊಂದೆಡೆ ಕೆಲವೇ ತಿಂಗಳ ಹಿಂದೆ ಟೊಮ್ಯಾಟೊ ಬೆಲೆ ಹೆಚ್ಚಳವಾಗಿ ಕೆಲವು ರೈತರು ಒಂದಷ್ಟು ಲಾಭ ಮಾಡಿಕೊಳ್ಳುವ ಹಂತದಲ್ಲಿ ಬಿಜೆಪಿ ಸರ್ಕಾರ ತಡೆಯಿತು. ಇದೆಲ್ಲ ಕೇಂದ್ರ ಸರ್ಕಾರ ರೈತರಿಗೆ ಮಾಡುವ ಶೋಷಣೆ ಅಲ್ಲವೇ ಎಂದು ವಿಪಕ್ಷಗಳ ನಾಯಕರ ಟೀಕೆಗಳಿಗೆ ತಿರುಗೇಟು ನೀಡಿದರು.
ಹಿಂದೆ ಸರ್ಕಾರ ನಡೆಸಿದ ಮುಖ್ಯಮಂತ್ರಿಗಳು ನೀರು, ವಿದ್ಯುತ್, ಬೀಜ, ಗೊಬ್ಬರ ಉಚಿತವಾಗಿ ನೀಡಿದರು. ಇಂಥ ಎಲ್ಲವನ್ನೂ ಸರ್ಕಾರವಾಗಿ ನಾವು ಮಾಡುತ್ತಿದ್ದೇವೆ. ಆದರೆ ರೈತರು ಬೆಳೆಗೆ ವೈಜ್ಞಾನಿಕ ಬೆಲೆ ಕೊಡದೇ, ರೈತರನ್ನು ಸಶಕ್ತರನ್ನಾಗಿ ಮಾಡಲಿಲ್ಲ. ಇದೇ ಅರ್ಥದಲ್ಲಿ ನಾನು ಹೇಳಿದ್ದು ಎಂದು ಸಮಜಾಯಿಷಿ ನೀಡಿದರು.