Advertisement

Shivarajkumar; ತಮಿಳು ನಿರ್ದೇಶಕನ ಕನ್ನಡ ಚಿತ್ರದಲ್ಲಿ ಶಿವಣ್ಣ

12:23 PM Jun 24, 2024 | Team Udayavani |

ನಟ ಶಿವರಾಜ್‌ ಕುಮಾರ್‌ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಗೀತಾ ಶಿವರಾಜ್‌ ಕುಮಾರ್‌ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಹೊಸ ಪೋಸ್ಟರ್‌ ಬಿಡುಗಡೆ ಮಾಡಿ ಶುಭ ಕೋರಿದೆ.

Advertisement

ಶಿವರಾಜ್‌ ಕುಮಾರ್‌ ಅವರಿಗೆ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿರುವುದು ತಮಿಳು ನಿರ್ದೇಶಕ ಕಾರ್ತಿಕ್‌ ಅದ್ವೆ„ತ್‌. ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ “ಪಾಯುಮ್‌ ಒಲಿ ನೀ ಎನಕ್ಕು’ ಚಿತ್ರ ನಿರ್ದೇಶಿಸಿದ್ದಾರೆ. ಇದೀಗ ಸ್ಯಾಂಡಲ್‌ ವುಡ್‌ ಅಂಗಳಕ್ಕೆ ಎಂಟ್ರಿ ಕೊಡುತ್ತಿರುವ ಇವರಿಗೆ ನಿರ್ದೇಶಕನಾಗಿ ಎರಡನೇ ಸಿನಿಮಾ.

ಇದೊಂದು ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾವಾಗಿದ್ದು, ಶಿವಣ್ಣ ವಿಭಿನ್ನ ಲುಕ್‌ ಹಾಗೂ ವಿಭಿನ್ನ ಗೆಟಪ್‌ನಲ್ಲಿ ಕಾಣಸಿಕೊಳ್ಳಲಿದ್ದಾರಂತೆ. ಸದ್ಯ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು, ಸಂಗೀತದ ಕೆಲಸಗಳು ಸಾಗುತ್ತಿದೆ. ಆಗಸ್ಟ್‌ನಲ್ಲಿ ಚಿತ್ರದ ಮುಹೂರ್ತ ನಡೆಯಲಿದೆ.

ಸದ್ಯಕ್ಕೆ ಬೇರೆ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳಲು ಸಜ್ಜಾಗಿದೆ ಚಿತ್ರತಂಡ. ಸ್ಯಾಮ್‌ ಸಿ.ಎಸ್‌ ಸಂಗೀತ, ಎಜೆ ಶೆಟ್ಟಿ ಛಾಯಾಗ್ರಹಣ, ದೀಪು ಸಂಕಲನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಚಿತ್ರಕ್ಕಿದೆ.

ಇನ್ನು, ಶಿವರಾಜ್‌ಕುಮಾರ್‌ ಅವರು ಸದ್ಯ “ಭೈರತಿ ರಣಗಲ್‌’ ಚಿತ್ರದಲ್ಲಿ ಬಿಝಿಯಾಗಿದ್ದಾರೆ. ಈ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ನರ್ತನ್‌ ನಿರ್ದೇಶನದ ಈ ಚಿತ್ರವನ್ನು ಸ್ವತಃ ಶಿವಣ್ಣ ತಮ್ಮದೇ ಬ್ಯಾನರ್‌ನಲ್ಲಿ ನಿರ್ಮಿಸುತ್ತಿದ್ದಾರೆ.

Advertisement

ಚಿತ್ರದ ಬಗ್ಗೆ ಮಾತನಾಡುವ ಶಿವಣ್ಣ, “ಭೈರತಿ ರಣಗಲ್‌ನ ಸಣ್ಣ ಕಥೆಯನ್ನು ಇಲ್ಲಿ ಬೆಳೆಸಲಾಗಿದೆ. ಯಾಕೆ ಅವನು ಭೈರತಿ ರಣಗಲ್‌ ಆಗುತ್ತಾನೆ. ಜನರಿಗೆ ಯಾಕೆ ಅವನ್ನು ಕಂಡರೆ ಅಷ್ಟು ಪ್ರೀತಿ ಎಂದು ಹೇಳಲಾಗಿದೆ. ಹೆಚ್ಚು ಆಡಂಬರವಿಲ್ಲದೆ, ಸರಳವಾಗಿ ಈ ವಿಷಯವನ್ನು ಹೇಳಲಾಗಿದೆ. ಇಲ್ಲಿ ಎಷ್ಟು ಮಾತು ಬೇಕೋ, ಅಷ್ಟಿದೆ. ನರ್ತನ್‌ ತುಂಬಾ ಚೆನ್ನಾಗಿ ಕಥೆ ಮಾಡಿಕೊಂಡಿದ್ದಾರೆ’ ಎನ್ನುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next