Advertisement

ದೇವೇಗೌಡರ ಆರೋಗ್ಯ ವಿಚಾರಿಸಿದ ಶಿವಣ್ಣ

12:35 AM Feb 06, 2019 | Team Udayavani |

ಬೆಂಗಳೂರು: ನಟ ಶಿವರಾಜ್‌ಕುಮಾರ್‌ ಅವರು ಪತ್ನಿ ಗೀತಾ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ಅವರೊಂದಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಪದ್ಮನಾಭನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Advertisement

ಈ ಸಂದರ್ಭದಲ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿ ಮತ್ತೆ ಸ್ಪರ್ಧಿಸುವಂತೆ ಮಧು ಬಂಗಾರಪ್ಪ ಅವರಿಗೆ ದೇವೇಗೌಡರು ಸೂಚಿಸಿ ಈಗಿನಿಂದಲೇ ಕೆಲಸ ಆರಂಭಿಸುವಂತೆ ನಿರ್ದೇಶಿಸಿದರು ಎಂದು ಮೂಲಗಳು ತಿಳಿಸಿವೆ.

ಭೇಟಿಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಮಧು ಬಂಗಾರಪ್ಪ,ಹಿರಿಯರಾದ ದೇವೇಗೌಡರ ಆರೋಗ್ಯ ವಿಚಾರಿಸಲು ಬಂದಿದ್ದೆವು. ಉಳಿದಂತೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next