Advertisement

ಕಿರೀಟಿ ಸೆಟ್‌ ನಲ್ಲಿ ಶಿವಣ್ಣ

03:33 PM Sep 05, 2022 | Team Udayavani |

ಜನಾರ್ದನ ರೆಡ್ಡಿ ಪುತ್ರ ಕಿರೀಟಿ ನಾಯಕರಾಗಿರುವ ಚಿತ್ರ ಅದ್ಧೂರಿಯಾಗಿ ಮುಹೂರ್ತ ನೆರವೇರಿಸಿಕೊಂಡ ಶೂಟಿಂಗ್‌ ಅಖಾಡಕ್ಕೆ ಧುಮುಕ್ಕಿದ್ದ ಚಿತ್ರತಂಡ ಬ್ರೇಕ್‌ ತೆಗೆದುಕೊಳ್ಳದೇ ನಿರಂತರವಾಗಿ ಚಿತ್ರೀಕರಣ ನಡೆಸುತ್ತಿದೆ.

Advertisement

ಸದ್ಯ ಬೆಂಗಳೂರಿನ ನಾಗವಾರದ ಮ್ಯಾನತಾ ಟೆಕ್‌ ಪಾರ್ಕ್‌ ನಲ್ಲಿ ಚಿತ್ರದ ಶೂಟಿಂಗ್‌ ಭರದಿಂದ ಸಾಗುತ್ತಿದೆ. ಈ ಶೂಟಿಂಗ್‌ ಸೆಟ್‌ಗೆ ನಟ ಶಿವರಾಜ್‌ ಕುಮಾರ್‌ ಭೇಟಿ ನೀಡಿ ಹೊಸ ತಂಡವನ್ನು ಪ್ರೋತ್ಸಾಹಿಸಿದ್ದಾರೆ.

ಈ ಸಂದರ್ಭದಲ್ಲಿ ಕಿರೀಟಿ ಹಾಗೂ ಜೆನಿಲಿಯಾ ಭಾಗದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಕೆಲ ಅಲ್ಲಿಯೇ ಸಮಯ ಕಳೆದ ಶಿವಣ್ಣ ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಇಡೀ ತಂಡ ಹಾಗೂ ಜನಾರ್ದನ ರೆಡ್ಡಿ ಕೂಡ ಉಪಸ್ಥಿತರಿದ್ದರು.

ಹೆಸರಿಡದ ಕಿರೀಟಿ ಚೊಚ್ಚಲ ಸಿನಿಮಾದ ಟೈಟಲ್‌ ಇದೇ ತಿಂಗಳ 29ಕ್ಕೆ ಅನಾವರಣಗೊಳ್ಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next