Advertisement

Ghost: ಮೈಸೂರಿನಲ್ಲಿ ‘ಘೋಸ್ಟ್‌’ ಮೆರವಣಿಗೆ

03:32 PM Oct 14, 2023 | Team Udayavani |

ಸಂದೇಶ್‌ ನಾಗರಾಜ್‌ ಅರ್ಪಿಸುವ, ಸಂದೇಶ್‌ ಎನ್‌. ನಿರ್ಮಾಣದ ಹಾಗೂ ಶ್ರೀ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್‌ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ಘೋಸ್ಟ್‌ ಚಿತ್ರ ಅಕ್ಟೋಬರ್‌ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್‌ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ಮೆರವಣಿಗೆ ನಡೆಯಲಿದೆ.

Advertisement

ಜ್ವಾಲಾಮುಖಿ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಬಳಗ ಈ ಅದ್ಧೂರಿ ಮೆರವಣಿಗೆ ಆಯೋಜಿಸಿದೆ. ಡೋಲು, ನಗರಿ, ಕೇರಳದ ಚೆಂಡೆ, ತಮಟೆ ಮೊದಲಾದ ವಾದ್ಯಗಳು, ಜಾನಪದ ಕಲಾ ತಂಡಗಳು, ನೂರೈವತ್ತಕ್ಕೂ ಆಟೋಗಳಲ್ಲಿ ನಕ್ಷತ್ರಗಳು ಈ ಮೆರವಣಿಗೆಯ ಪ್ರಮುಖ ಆಕರ್ಷಣೆ. ಸಾವಿರಾರು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಮೈಸೂರಿನ ಇಟ್ಟಿಗೆಗೂಡಿನಿಂದ ಆರಂಭವಾಗುವ ಮೆರವಣಿಗೆ ಡಿಸಿ ಕಛೇರಿ ಮೂಲಕ ಸಾಗಿ ವುಡ್‌ಲ್ಯಾಂಡ್ಸ್‌ ಮಂದಿರ ತಲುಪಲಿದೆ.

ಕರುನಾಡ ಚಕ್ರವರ್ತಿ ಡಾ.ಶಿವರಾಜ ಕುಮಾರ್‌, ನಿರ್ಮಾಪಕರಾದ ಸಂದೇಶ್‌ ಮುಂತಾದವರು ಈ ಅದ್ಧೂರಿ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.ಮೈಸೂರಿನಲ್ಲಿ ಈಗ ದಸರಾ ಸಡಗರ. ಅದರೊಂದಿಗೆ ಘೋಸ್ಟ್‌ ಚಿತ್ರ ಸಹ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಆನಂದವನ್ನು ಮತ್ತಷ್ಟು ಹೆಚ್ಚಿಸಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next