Advertisement

‘ಅಶ್ವತ್ಥಾಮ’ನಾಗಲು ಶಿವಣ್ಣ ರೆಡಿ; ಸೆಪ್ಟೆಂಬರ್‌ನಿಂದ ಚಿತ್ರೀಕರಣ ಪ್ರಾರಂಭ

03:50 PM May 19, 2022 | Team Udayavani |

ಶಿವರಾಜ್‌ ಕುಮಾರ್‌ “ಅಶ್ವತ್ಥಾಮ’ ಎಂಬ ಸಿನಿಮಾ ಮಾಡಲಿದ್ದಾರೆ ಎಂಬ ವಿಚಾರ ನಿಮಗೆ ಗೊತ್ತೇ ಇದೆ. ಈಗ ಈ ಚಿತ್ರದ ಸೆಟ್ಟೇರುವ ಹಂತಕ್ಕೆ ಬಂದಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಚಿತ್ರ ಸೆಪ್ಟೆಂಬರ್‌ನಿಂದ ಆರಂಭವಾಗಲಿದೆ.

Advertisement

ಈ ಚಿತ್ರನ್ನು ಸಚಿನ್‌ ನಿರ್ದೇಶಿಸಲಿದ್ದಾರೆ. ಜೊತೆಗೆ ನಿರ್ಮಾಣದ ಜವಾಬ್ದಾರಿ ಕೂಡಾ ಇವರದೇ. ಈ ಹಿಂದೆ “ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಿರ್ದೇಶಿಸಿರುವ ಸಚಿನ್‌ಗೆ ಇದು ಎರಡನೇ ಚಿತ್ರ.

ಇದನ್ನೂ ಓದಿ:ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ : ಪ್ರಕರಣವೇನು?

ಈ ಸಿನಿಮಾದಲ್ಲಿ ಶಿವಣ್ಣ ಮಹಾಭಾರತದ ಅಶ್ವತ್ಥಾಮನಾಗಿ ಬಣ್ಣ ಹಚ್ಚಲಿದ್ದು, ಇದೊಂದು ಆಕ್ಷನ್‌-ಸ್ಪೈ ಥ್ರಿಲ್ಲರ್‌ ಕಥಾಹಂದರವನ್ನು ಒಳಗೊಂಡಿದೆ. ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ಸೂಪರ್‌ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಗ್ರಾಫಿಕ್‌ಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆಯಂತೆ.

ಸದ್ಯ ಶಿವರಾಜ್‌ಕುಮಾರ್‌ ನಟಿಸಿರುವ “ಬೈರಾಗಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಇದಲ್ಲದೇ ಅವರದ್ದೇ ನಿರ್ಮಾಣದ “ವೇದ’ ಚಿತ್ರದ ಚಿತ್ರೀಕರಣ ನಡೆಯುತ್ತಿದೆ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next