Advertisement

ಬೆಳಗಾವಿ ಭೀಕರ ಅಪಘಾತದಲ್ಲಿ 9 ಮಂದಿ ಸಾವು : ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸಂತಾಪ

06:12 PM Jun 26, 2022 | Team Udayavani |

ಯಲ್ಲಾಪುರ : ಗೋಕಾಕದಿಂದ ಬೆಳಗಾವಿಗೆ ತೆರಳುವ ಮಾರ್ಗದಲ್ಲಿ ಕ್ರೂಸರ್ ವಾಹನ ಅಪಘಾತಕ್ಕೀಡಾಗಿ 9 ಜನ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ ಸಾವನ್ನಪ್ಪಿರುವ ಕುಟುಂಬಕ್ಕೆ ಸರ್ಕಾರದ ಪರವಾಗಿ ಹಾಗೂ ಕಾರ್ಮಿಕ ಇಲಾಖೆ ಪರವಾಗಿ ಸಾಂತ್ವನ ಹೇಳುತ್ತೇನೆ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

Advertisement

ಅವರು ಈ ಕುರಿತು ಹೇಳಿಕೆ ನೀಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸೂಚನೆಯಂತೆ ಕಾರ್ಮಿಕ ಇಲಾಖೆಯ ಕಾರ್ಡ್ ಇರುವ ಅಪಘಾತದಲ್ಲಿ ಮೃತರಾದ 5 ಜನರ ಕುಟುಂಬದವರಿಗೆ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ತಲಾ 5ಲಕ್ಷ ರೂ ಪರಿಹಾರವನ್ನು ಅತಿ ಶೀಘ್ರವಾಗಿ ನೀಡಲಾಗುವುದು.

ಅಲ್ಲದೆ ಉಳಿದ 4ಜನ ಕಾರ್ಮಿಕರಿಗೆ ಮಾನವೀಯ ನೆಲೆಯಲ್ಲಿ ತಲಾ 3ಲಕ್ಷ ರೂಪಾಯಿ ಪರಿಹಾರವನ್ನು ಅವರ ಆಶ್ರಿತರಿಗೆ ನೀಡಲಾಗುವುದು. ಈ ಪರಿಹಾರವನ್ನು ಅತೀ ಶೀಘ್ರದಲ್ಲಿ ಅವರ ಕುಟುಂಬದವರಿಗೆ ತಲುಪಿಸಲಾಗುವುದು ಹಾಗೂ ಗಾಯಾಳುಗಳಿಗೆ ಸಹ ಉತ್ತಮ ರೀತಿಯ ಚಿಕಿತ್ಸೆ ದೊರಕುವಂತೆ ಕ್ರಮವಹಿಸುವುದಾಗಿ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ : ಕಲಬುರ್ಗಿಯಲ್ಲಿ 74.50 ಲಕ್ಷ ರೂ. ಮೌಲ್ಯದ  745.410 ಕೆಜಿ ಗಾಂಜಾ ದಹನ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next