Advertisement

40% ಆರೋಪದ ಬಗ್ಗೆ ತನಿಖೆಯ ಆರಂಭಿಸಿರುವುದು ಸ್ವಾಗತಾರ್ಹ: ಸಚಿವ ಶಿವರಾಮ ಹೆಬ್ಬಾರ್

02:43 PM Jun 28, 2022 | Team Udayavani |

ಶಿವಮೊಗ್ಗ:‌ ಶೇ.40 ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿಗಳ ಸಚಿವಾಲಯ ತನಿಖೆ ಆರಂಭಿಸಿರುವುದು ಸ್ವಾಗತಾರ್ಹ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿ. ದಾಖಲೆಗಳಿದ್ದರೆ ಯಾರು ತಪ್ಪು ಮಾಡಿದ್ದಾರೆ ಎಂಬದು ಗೊತ್ತಾಗುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆಗೆ ಆದೇಶ ಮಾಡಿದ್ದಕ್ಕೆ ಪ್ರಧಾನಮಂತ್ರಿ‌ ಸಚಿವಾಲಯಕ್ಕೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಒಂದು ಆರೋಪಕ್ಕೆ ಸಂಬಂಧಿಸಿದಂತೆ ನಮ್ಮದೇ ಸರ್ಕಾರವಿದ್ದರೂ ತನಿಖೆಗೆ ಆದೇಶ ಮಾಡಿರುವುದಕ್ಕೆ ಎಲ್ಲರೂ ಭಾರತ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಬೇಕು ಎಂದರು.

ರಾಜ್ಯದಲ್ಲಿ ಮೊದಲ ಬಾರಿಗೆ ಕಾರ್ಮಿಕರಿಗೆ ಶ್ರಮಿಕ ಭವನ ನಿರ್ಮಾಣವಾಗುತ್ತಿದ್ದು, ಇದೊಂದು ಕ್ರಾಂತಿಕಾರಿ ಬದಲಾವಣೆಯಾಗಿದೆ. ಮನೆ ಮನೆಗೆ ಔಷಧ ಸೇರಿದಂತೆ ಹಲವು ಬದಲಾವಣೆ ತರಲಾಗಿದೆ. 27 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗದ ಸಿದ್ಲಿಪುರದಲ್ಲಿ ಶ್ರಮಿಕ ಭವನ ನಿರ್ಮಾಣವಾಗುತ್ತಿದೆ. ಹಾಗೆಯೇ ಭದ್ರಾವತಿಯ ಉಜ್ಜನಿಪುರದಲ್ಲಿ ಕೂಡ ಕಾರ್ಮಿಕ ಭವನ ನಿರ್ಮಾಣವಾಗಲಿದೆ ಎಂದರು.

ಕಾರ್ಮಿಕ ನ್ಯಾಯಾಲಯದ ಬಗ್ಗೆ ಯೋಚನೆ ಮಾಡಿಲ್ಲ. ಕಾರ್ಮಿಕ ಅದಾಲತ್ ಇದೇ ಜುಲೈ 15 ರಿಂದ ಆಗಸ್ಟ್ 15 ವರೆಗೆ ನಡೆಯಲಿದೆ. ಇದರಿಂದಾಗಿ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಸಹಾಯವಾಗುತ್ತದೆ. ಇಎಸ್ಐ ಕಾರ್ಡ್ ಇದ್ದರೂ ಚಿಕಿತ್ಸೆ ಸಿಗುತ್ತಿಲ್ಲ ಎಂಬುದು ಸರಿಯಲ್ಲ, ಇಎಸ್ಐ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಅಗತ್ಯ ಬಿದ್ದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತದೆ ಎಂದು ಶಿವರಾಮ ಹೆಬ್ಬಾರ್ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next