Advertisement
ಸಹಾಯಧನ ಪರಿಷ್ಕರಣೆ ಸಂಬಂಧ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ 90ನೇ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಇಲಾಖೆ ಜಾರಿ ಮಾಡಿದೆ. ಸಹಾಯಧನ ಪರಿಷ್ಕರಣೆ ಜೊತೆಗೆ ಇದೇ ಮೊದಲ ಬಾರಿಗೆ ಮಹಿಳಾ ಕಾರ್ಮಿಕರಿಗೆ ಹೆರಿಗೆ ಭತ್ಯೆಯನ್ನು ಘೋಷಿಸಲಾಗಿದೆ.
Related Articles
Advertisement
ಮೃತ ಕಾರ್ಮಿಕನ ಅಂತ್ಯ ಸಂಸ್ಕಾರಕ್ಕಿದ್ದ ಧನ ಸಹಾಯವನ್ನೂ ಏರಿಕೆ ಮಾಡಲಾಗಿದ್ದು, 5,000 ರೂ. ಇದ್ದ ಧನ ಸಹಾಯವನ್ನು ದ್ವಿಗುಣ ಗೊಳಿಸಿ 10,000 ರೂ.ಗೆ ನಿಗಧಿಪಡಿಸಲಾಗಿದೆ. ವಾರ್ಷಿಕವಾಗಿ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಳ್ಳುವ ಟ್ರೇಡ್ ಯೂನಿಯನ್ ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತಿದ್ದ ಧನ ಸಹಾಯದಲ್ಲಿ ಭಾರೀ ಏರಿಕೆ ಮಾಡಲಾಗಿದ್ದು, ಈ ಧನ ಸಹಾಯವನ್ನು 30,000 ರೂ ನಿಂದ 1 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ.
ಸಂಘಟಿತ ಮಹಿಳಾ ಕಾರ್ಮಿಕರಿಗೆ ಮೊದಲ ಎರಡು ಮಕ್ಕಳಿಗೆ ತಲಾ 10,000 ರೂ. ಹೆರಿಗೆ ಭತ್ಯೆ ನೀಡುವಂತಹ ಮಹತ್ವ ನಿರ್ಧಾರವನ್ನೂ ಇಲಾಖೆ ಕೈಗೊಂಡಿದ್ದು, ವಾರ್ಷಿಕ ಕ್ರೀಡಾಕೂಟ ಧನ ಸಹಾಯವನ್ನು 50,000 ರೂ. ನಿಂದ 1 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ಈ ಯೋಜನೆಗಳ ಜಾರಿಯನ್ನು ಸರ್ಕಾರದ ಯಾವುದೇ ಅನುದಾನ ಬಳಕೆ ಇಲ್ಲದೆ ಕಾರ್ಮಿಕ ಕಲ್ಯಾಣ ಮಂಡಳಿ ಸಂಪನ್ಮೂಲದಿಂದಲೇ ಭರಿಸಲಾಗುವುದು ಎಂದು ತಿಳಿಸಿರುವ ಸಚಿವ ಶಿವರಾಂ ಹೆಬ್ಟಾರ್ ಈ ಸಹಾಯಧನ ಪರಿಷ್ಕರಣೆಯಿಂದ ಸಂಘಟಿತ ಕಾರ್ಮಿಕ ವಲಯಕ್ಕೆ ಹೆಚ್ಚಿನ ಅನುಕೂಲ ಆಗಲಿದೆ ಎಂದರು.
ಕಾರ್ಮಿಕ ಕಲ್ಯಾಣ ಯೋಜನೆಗಳ ದರ ಪರಿಷ್ಕರಣೆ ಕಾರ್ಮಿಕ ಸಂಘಟನೆಗಳ ಬಹು ದಿನಗಳ ಬೇಡಿಕೆಯಾಗಿತ್ತು ಮತ್ತು ಕಳೆದ ಐದಾರು ವರ್ಷಗಳಿಂದ ದರ ಪರಿಷ್ಕರಣೆ ಕಾರ್ಯ ನಡೆದಿರಲಿಲ್ಲ. ಹೀಗಾಗಿ ಸಂಕಷ್ಟ ದ ಸಂದರ್ಭ ಮತ್ತು ಬೆಲೆಗಳಲ್ಲಿ ಆಗಿರುವ ಏರುಪೇರುಗಳನ್ನು ಪರಿಗಣಿಸಿ ಕಾರ್ಮಿಕರ ಹಿತವನ್ನೇ ಪ್ರಮುಖ ಗುರಿಯಾಗಿಸಿಕೊಂಡು ದರ ಪರಿಷ್ಕರಣೆ ಮಾಡಲಾಗಿದೆ. ಹೆಚ್ಚಿನ ಕಾರ್ಮಿಕರು ಈ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂಬುದೇ ಸರ್ಕಾರದ ಉದ್ದೇಶ-ಶಿವರಾಂ ಹೆಬ್ಟಾರ್, ಕಾರ್ಮಿಕರ ಸಚಿವರು