Advertisement
ಚೋಮನ ದುಡಿಯಲ್ಲಿ ಮತ್ತೆ ಕಣ್ಣಾಡಿಸುತ್ತಿ¨ªೆ. ತಕ್ಷಣ ಏನೋ ನೆನಪಾಗಿ ಹಾಗೇ ನಿಂತೆ.ಸುಮಾರು ನಾಲ್ಕು ದಶಕದ ಹಿಂದಿನ ಮಾತು. ನಾನಾಗಿದ್ದಿದ್ದರೆ ಚೋಮ ದೇವರ ಗುಡಿಗೆ ಕೈ ಮುಗಿಯುವ ಹಾಗೆ ಮಾಡುತ್ತಿರಲಿಲ್ಲ. ಆತ ಪಂಜುರ್ಲಿಯನ್ನು ದಾಟಿಕೊಂಡೇ ತಾನು ಬಯಸಿದ ಕಡೆ ಹೋಗುವಂತೆ ಮಾಡುತ್ತಿ¨ªೆ ಎನ್ನುವ ಅರ್ಥದ ಮಾತು ಚಂದ್ರಶೇಖರ ಪಾಟೀಲರ ಸಂಪಾದಕತ್ವದ ಸಂಕ್ರಮಣದಲ್ಲಿತ್ತು.
ಆಮೇಲೆ… ಆಮೇಲಾಮೇಲೆ… ಪ್ರಶ್ನೆ ಮಾಡುವ, ಕಾರಂತರನ್ನೂ ಪ್ರಶ್ನೆ ಮಾಡುವ, ಸಕಲ ಚರಾಚರಗಳನ್ನೂ ಪ್ರಶ್ನೆ ಮಾಡುವ, ದೇವರಿಗೇ ಸವಾಲು ಎಸೆಯುವ, ಪ್ರಭುತ್ವವನ್ನು ಜಗ್ಗಿ ಮಾತನಾಡಿಸುವ… ಎಲ್ಲವನ್ನೂ ಕಲಿಸಿದ್ದು ಕಾರಂತರೇ ಎಂದು ಗೊತ್ತಾಯಿತು. ಶಿವರಾಮ ಕಾರಂತರು ನನ್ನ ಮನದೊಳಗೆ ನೆಟ್ಟು ನಿಂತದ್ದು ಹೀಗೆ.
ಇನ್ನೂ ನಾಲ್ಕನೇ ತರಗತಿಯಲ್ಲಿರುವಾಗಲೇ ನಾನು “ವಾಸನ್ ಸಕ್ಯುìಲೇಟಿಂಗ್ ಲೈಬ್ರೆರಿ’ಯ ಮುಚ್ಚಿದ ಶಟರ್ ಯಾವಾಗ ತೆರೆಯುವುದೋ ಎಂದು ಕಾಯುತ್ತ ನಿಂತಿರುತ್ತಿ¨ªೆ. ಅಲ್ಲಿದ್ದ ಅಮರಚಿತ್ರ ಕಥಾ ಮಾಲಿಕೆಯ ಎಲ್ಲಾ ಪುಸ್ತಕಗಳನ್ನೂ ಒಂದೇ ಗುಕ್ಕಿಗೆ ಓದಿ ಮುಗಿಸುವ ಹಸಿವಿನಲ್ಲಿರುತ್ತಿ¨ªೆ. ಶಿವರಾಮ ಕಾರಂತ ಎನ್ನುವ ಹೆಸರು ನನಗೆ ಸಿಕ್ಕಿದ್ದು ಇಲ್ಲಿಯೇ. ಅಮರಚಿತ್ರ ಕಥಾ ಮಾಲಿಕೆ ಯ ಕನ್ನಡದ ಬಹುತೇಕ ಅನುವಾದ ಇವರದ್ದೇ. ಅದಕ್ಕೆ ಮು¨ªಾದ ಕೈಬರಹದ ಜೊತೆ ನೀಡುತ್ತಿದ್ದವರು ಕಮಲೇಶ್.
Related Articles
Advertisement
ಕಾರಂತರು ವಿಜ್ಞಾನ ವಿಷಯಗಳನ್ನು ಬರೆದರು. ತಮ್ಮ ಅಪಾರ ಓದನ್ನೆಲ್ಲ ಕನ್ನಡ ಜಗತ್ತಿಗೆ ಧಾರೆ ಎರೆದುಬಿಡಬೇಕು ಎನ್ನುವಂತೆ ಬರೆದೇ ಬರೆದರು. ಅದನ್ನೆಲ್ಲ ಓದುತ್ತ ದಕ್ಕಿಸಿಕೊಳ್ಳುತ್ತ ಹೋಗುತ್ತಿ¨ªಾಗ ತುರ್ತು ಪರಿಸ್ಥಿತಿ ಸದ್ದಿಲ್ಲದೇ ಕಳ್ಳ ಹೆಜ್ಜೆಯಲ್ಲಿ ಒಳಗೆ ಬರಲು ಹವಣಿಸುತ್ತಿತ್ತು. ಆ ಸಮಯಕ್ಕೆ ಸರಿಯಾಗಿ ಚೋಮನೂ ಬೆಳ್ಳಿತೆರೆಯ ಮೇಲೆ ದುಡಿ ಕೈಗೆತ್ತಿಕೊಂಡಿದ್ದ. ದೇಶಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಹೊಸಕಿ ಹಾಕುವ ಹುನ್ನಾರ ನಡೆದಿತ್ತು. ಹಾಗಾಗಿಯೇ ವೈಚಾರಿಕತೆಯ ಬಿರುಗಾಳಿ ಎಲ್ಲೆಲ್ಲೂ ಹರಡಲು ಆರಂಭವಾಗಿತ್ತು. ಚೋಮನ ದುಡಿ ಈ ಸಮಯಕ್ಕೆ ಉರಿಯುವ ಪಂಜಿಗೆ ಕೀಲೆಣ್ಣೆಯಾಗಿ ಒದಗಿತು.
ಹಾಗಾಗಿ, ಚೋಮನ ಬಗ್ಗೆ, ಆತನ ನೋವುಗಳ ಬಗ್ಗೆ, ಆತನ ವಿಷಾದದ ಬಗ್ಗೆ ನಮ್ಮದೇ ಆದ ನೋಟಗಳಿತ್ತು. ಅದೇ ನೋಟಗಳನ್ನು ಕಟ್ಟಿಕೊಂಡೇ ಬೆಳೆಯುತ್ತಿದ್ದ ನನಗೆ ಸಂಕ್ರಮಣ ಶಾಕ್ ಕೊಟ್ಟಿತ್ತು. ಲೇಖಕರು ಚೋಮನನ್ನೂ ಆ ಮೂಲಕ ಶಿವರಾಮ ಕಾರಂತರನ್ನೂ ಪ್ರಶ್ನಿಸಿದ್ದರು. ಚೋಮನ ದುಡಿ ಮತ್ತೆ ಓದಿದೆ. ಹೌದಲ್ಲ, ಚೋಮ ವ್ಯವಸ್ಥೆಗೆ ಬಲಿಯಾಗಿ ಕುಸಿಯುವ ಬದಲು? ಎಂದು ನನಗೂ ಅನ್ನಿಸಿತು. ಆಗ ಮತ್ತೆ ಶಿವರಾಮ ಕಾರಂತರನ್ನು ಭೂತಗನ್ನಡಿಯ ಮೂಲಕ ನೋಡಲಾರಂಭಿಸಿದೆ.
ಶಿವರಾಮ ಕಾರಂತರು ಇದ್ದ ವ್ಯವಸ್ಥೆಗೆ ಸಡ್ಡು ಹೊಡೆದವರು. ಎಲ್ಲರೂ ಒಪ್ಪಿಕೊಂಡು “ಮಂದೆಯೊಳಗೊಂದಾಗಿ’ ಹೋಗುತ್ತಿ¨ªಾಗ ಭಿನ್ನ ದಾರಿಯನ್ನು ಹಿಡಿದವರು. ರೇಗುತ್ತಲೇ ವಿಷಯದ ಮೊನಚನ್ನು ಅರ್ಥ ಮಾಡಿಸುತ್ತಿದ್ದವರು. ಪ್ರಶ್ನಿಸಲೇಬೇಕು ಎಲ್ಲವನ್ನೂ ಎಂದು ದೃಢವಾಗಿ ನಂಬಿದ್ದವರು. ತಾವೊಬ್ಬರೇ ಅಲ್ಲ ಎಲ್ಲರೂ… ಎಂದು ಹಾತೊರೆಯುತ್ತಿದ್ದವರು. ಅಲೆಯ ವಿರುದ್ಧ ಈಜುವುದು ಕಾರಂತರಿಗೆ ತೀರಾ ಸಹಜ ಕ್ರಿಯೆಯಾಗಿತ್ತು.
ಒಂದು ಸಲ ಹೀಗಾಯ್ತು- ಪುತ್ತೂರಿನ “ಬಾಲವನ’ದಲ್ಲಿ¨ªೆ. “ನಿರತನಿರಂತ’ದ ಗೆಳೆಯರೆಲ್ಲರೂ ಕೂಡಿ ಮಕ್ಕಳೊಡನೆ ಗಮ್ಮತ್ತು ಮಾಡುತ್ತಿದ್ದರು. ಅದಕ್ಕೆ ಶಿವರಾಮ ಕಾರಂತರು ಕಣ್ಣಾಗಿದ್ದರು. ಆ ವೇಳೆಗೆ ಕುಂದಾಪುರ ತಲುಪಿಕೊಂಡಿದ್ದ ಕಾರಂತರಿಗೆ ಬಾಲವನಕ್ಕೆ ಬಂದಾಗ ಮುಖದಲ್ಲಿ ತವರಿಗೆ ಬಂದ ಸಂಭ್ರಮವಿತ್ತು. ಅವರು ಮಕ್ಕಳಿಗೆ ಕಥೆ ಹೇಳುತ್ತ, ನಗುತ್ತ ಕುಳಿತಿ¨ªಾಗ, “ಅರೆ! ಸಿಂಹಕ್ಕೂ ನಗು ಇದೆ’ ಎಂದು ನಾವೆಲ್ಲರೂ ಕಿಸಪಿಸ ಮಾತಾಡಿಕೊಂಡಿ¨ªೆವು.
ಆಗಲೇ ಕಲಾವಿದ ಗೆಳೆಯರೊಬ್ಬರು ಅವರ ಮುಂದೆ ಒಬ್ಬ ಬಾಲಕನನ್ನು ನಿಲ್ಲಿಸಿದರು. ನೆನಪಿನ ಶಕ್ತಿಯ ಬಗ್ಗೆ ಏನೇನೋ ಪ್ರಯೋಗ ನಡೆಸುತ್ತಿದ್ದ ಕಲಾವಿದ ಆತ. ಆ ಮಗುವನ್ನು ಕಾರಂತರ ಮುಂದೆ ನಿಲ್ಲಿಸಿ, “ಸಾರ್, ಇವನು ಯಾವ ದೇಶದ ಬಾವುಟ ಬೇಕಾದರೂ ಗುರುತಿಸುತ್ತಾನೆ, ದೇಶದ ಚರಿತ್ರೆಯ ದಿನಾಂಕಗಳನ್ನು ಪಟಪಟನೆ ಹೇಳುತ್ತಾನೆ, ಜಗತ್ತಿನ ಎಲ್ಲಾ ರಾಜಧಾನಿಗಳ ಹೆಸರೂ ಗೊತ್ತು, ಪ್ರಧಾನಿ ಅಧ್ಯಕ್ಷರು ರಾಷ್ಟ್ರಪತಿ ಪಕ್ಷಗಳು ಹೀಗೆ ಎಲ್ಲವೂ…’ ಎಂದು ಉತ್ಸಾಹದಿಂದ ಬಣ್ಣಿಸುತ್ತಿದ್ದ.
ಮಾತನ್ನು ಅರ್ಧಕ್ಕೆ ತುಂಡರಿಸಿದವರೇ ಕಾರಂತರು, “ಅವೆಲ್ಲ ಸರಿ, ಆ ಮಗುವಿಗೆ ಮಣ್ಣಲ್ಲಿ ಆಡಲು ಬರುತ್ತದಾ?’ ಎಂದಿದ್ದರು. ಹುಡುಗನ ಶಕ್ತಿ ಬಣ್ಣಿಸುತ್ತಿದ್ದವರು ಕಕ್ಕಾಬಿಕ್ಕಿ. ಕಾರಂತರು ಹೇಳಿದರು, “ಮಗು ಮಗುವಾಗಿರಲಿ ಅವನನ್ನು ಈ ವಯಸ್ಸಿನಲ್ಲೇ ಬೋನ್ಸಾಯ್ ಆಗಿಸಬೇಡಿ’ ಅಂತ.
ಒಮ್ಮೆ ಕಾರಂತರು ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದರು. ಅದೇ ರೈಲಿನಲ್ಲಿ ಒಬ್ಬ ಕಲಾವಿದರಿದ್ದರು.ಆ ಕಲಾವಿದರಿಗೆ ಒಂದು ಹವ್ಯಾಸವಿತ್ತು. ಉಗುರಿನಲ್ಲಿ ಚಿತ್ರ ಬಿಡಿಸುವುದು. ಸೀದಾ ಹೋಗಿ ಕಾರಂತರ ಎದುರು ಕುಳಿತಿ¨ªಾರೆ. ಅವರನ್ನೇ ಒಂದಷ್ಟು ಹೊತ್ತು ದಿಟ್ಟಿಸಿ ನೋಡಿ¨ªಾರೆ. ಬ್ಯಾಗಿನಿಂದ ಒಂದು ಡ್ರಾಯಿಂಗ್ ಹಾಳೆ ತೆಗೆದವರೇ ಅವರನ್ನು ನೋಡುವುದು. ಕಾಗದದಲ್ಲಿ ಉಗುರು ಉಜ್ಜುವುದು. ಹೀಗೆ ಸುಮಾರು ಅರ್ಧ ಗಂಟೆ ಆಗಿದೆ. ಆಮೇಲೆ “ಆಹಾ…’ ಅಂದುಕೊಂಡು ತಾನು ಹಾಳೆಯ ಮೇಲೆ ಉಗುರಿನಿಂದ ರಚಿಸಿದ ಕಾರಂತರ ಭಾವಚಿತ್ರವನ್ನು ಅವರ ಕೈಗಿರಿಸಿ ಮೆಚ್ಚುಗೆಗಾಗಿ ಕಿವಿಯೆಲ್ಲ ದೊಡ್ಡದು ಮಾಡಿಕೊಂಡು ಕುಳಿತಿ¨ªಾರೆ. ಕಾರಂತರು ಆ ಚಿತ್ರವನ್ನು ಆ ಕಡೆಯಿಂದ ಈ ಕಡೆಯಿಂದ ಹತ್ತು ಬಾರಿ ನೋಡಿದವರೇ, “ಸರಿ, ಈ ರೀತಿ ಇರೋದಕ್ಕೆ ಪ್ರಯತ್ನಿಸ್ತೀನಿ’ ಎಂದಿ¨ªಾರೆ.
ಕಾರಂತರೆಂದರೆ ಹಾಗೆ… ಯಾರನ್ನೂ ಮೆಚ್ಚಿಸುತ್ತಾ ಕೂರುವ ಮಾತೇ ಇಲ್ಲ, “ಇದೇನು ಶೋಕ ಗೀತೆ ಏನ್ರೀ’ ಅಂತ ಅತಿ ಅಸಹನೆಯಿಂದ ಸಭಿಕರನ್ನು ಪ್ರಶ್ನಿಸಿದರು. ಅದು ಬಂಟವಾಳದಲ್ಲಿ ನಡೆದ ಕಾರ್ಯಕ್ರಮ. ಅವತ್ತು ಅಲ್ಲಿ ರಾಷ್ಟ್ರಗೀತೆ ಹಾಡಿದ್ದರು. ಕಾರಂತರು ರಾಷ್ಟ್ರಗೀತೆ ಮುಗಿಯುತ್ತಿದ್ದಂತೆ ತಮ್ಮದು ಕೊನೆಯಲ್ಲಿ ಆಗಬೇಕಾದ ಅಧ್ಯಕ್ಷ ಭಾಷಣ ಎನ್ನುವುದನ್ನೂ ಮರೆತಂತೆ ಎದ್ದು ನಿಂತವರೇ, “ಅಲ್ಲ ರಾಷ್ಟ್ರಗೀತೆ ಎಂದರೆ ಉತ್ಸಾಹದಿಂದ ಹಾಡಬೇಕು, ಕುಣಿಯುವ ಹುಮ್ಮಸ್ಸು ಬರುವಂತೆ ಹಾಡಬೇಕು. ಅದು ಬಿಟ್ಟು ಈ ದೇಶಕ್ಕೆ ಏನಾಗಿದೆ? ರಾಷ್ಟ್ರಗೀತೆಯನ್ನ ಶೋಕಗೀತೆಯ ಥರಾ ಹಾಡ್ತಾರೆ ತಲೆತಗ್ಗಿಸಿ, ಕೈಕಟ್ಟಿ ಛೆ!’ ಎಂದರು. “ನಾವು ರಾಷ್ಟ್ರಗೀತೆಗೆ ಮಿಲಿಟರಿ ಶಿಸ್ತು ತಂದುಬಿಟ್ಟಿದ್ದೇವೆ’ ಎಂದು ತೀರಾ ಬೇಸರಪಟ್ಟುಕೊಂಡರು. ಕಾರಂತರೆಂದರೆ ಹಾಗೆ. ಅವರಿಗೆ ಬೇರೆಯವರಂತೆ ಸುಮ್ಮನೆ ಕೂರಲು ಆಗುತ್ತಿರಲಿಲ್ಲ ಹಾಗೂ ಬೇರೆಯವರಂತೆ ಮನಸ್ಸಿಗೆ ಮುಸುಕು ಹಾಕಲೂ ಸಾಧ್ಯವಾಗುತ್ತಿರಲಿಲ್ಲ. ಒಂದು ವಿಷಯ ನಿಮಗೆ ಹೇಳಲೇಬೇಕು. ನಾನು ಮಂಗಳೂರಿಗೆ ಸೇರಿಕೊಂಡ ಆರಂಭದ ದಿನಗಳು ಅವು. ಹೋದ ಕೆಲ ದಿನಕ್ಕೇ “ಶಿವರಾಮ ಕಾರಂತರ ಫೋನ್ ನಂಬರ್ ಬೇಕಲ್ಲ’ ಅಂದೆ. ಆಗ ಟೆಲಿಕಾಂ ಪಿಆರ್‌ಓ ಆಗಿದ್ದ ಎಂ. ಜಿ. ಹೆಗಡೆ ನಂಬರ್ ಕೊಟ್ಟರು. ತಿರುಗಿಸಿದರೆ ಅದು “ಕೊಂಯ್’ ಅಂತ ಕೂಡಾ ಅನ್ನಲಿಲ್ಲ. ನಾನು ಹೆಗಡೆ ಅವರಿಗೆ ಫೋನ್ ತಿರುಗಿಸಿ, “ಯಾವುದೋ ರಾಂಗ್ ನಂಬರ್ ಕೊಟ್ಟಿರಬೇಕು’ ಅಂದೆ. ಅವರು, “ಇಲ್ಲ , ಅದೇ ನಂಬರ್’ ಅಂದರು. “ನೀವೇ ತಿರುಗಿಸಿ ನೋಡಿ ಅದು ಸದ್ದೇ ಮಾಡುತ್ತಿಲ್ಲ’ ಎಂದೆ. ಆಗ ಅವರು ಜೋರಾಗಿ ನಕ್ಕವರೇ, “ಕಾರಂತರು ಒನ್ ವೇ ಸ್ವಾಮಿ’ ಅಂದರು. ನನಗೆ ಅರ್ಥ ಆಗಲಿಲ್ಲ. “ಏನು’ ಅಂದೆ. “ಕಾರಂತರು ಬೇರೆಯವರಿಗೆ ಫೋನ್ ಮಾಡಬಹುದೇ ಹೊರತು ಕಾರಂತರಿಗೆ ನೀವು ಮಾಡೋದಿಕ್ಕೆ ಆಗೋದಿಲ್ಲ’ ಅಂದರು. ದಕ್ಷಿಣಕನ್ನಡ ಟೆಲಿಕಾಂ ಕಾರಂತರಿಗಾಗಿ ಹೊರಹೋಗುವ ಕರೆ ಸೌಲಭ್ಯ ಮಾತ್ರವಿರುವ ಸೆಟ್ ಕೊಟ್ಟಿತ್ತು, ಅವರ ಕೋರಿಕೆಯ ಮೇರೆಗೆ. ಒಂದು ವರ್ಷ ರಾಜ್ಯೋತ್ಸವ ಪ್ರಶಸ್ತಿಗೆ ಸೂಕ್ತರನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಸರ್ಕಾರ ಕಾರಂತರಿಗೆ ವಹಿಸಿತ್ತು. ಕಾರಂತರನ್ನು ಉಡುಪಿಯ ಕು. ಶಿ. ಹರಿದಾಸ ಭಟ್ಟರ ಸಂಶೋಧನಾ ಕೇಂದ್ರದಲ್ಲಿ ಭೇಟಿ ಮಾಡಿ, “ಹೇಗಿದೆ ಪ್ರಶಸ್ತಿ ಆಯ್ಕೆ ಕೆಲಸ’ ಎಂದೆ. ಕಾರಂತರು ಪ್ರಶಸ್ತಿಯನ್ನೂ, ಪ್ರಶಸ್ತಿಗಾಗಿಯೇ ಬದುಕಿರುವವರನ್ನು ಹುಣಿಸೆಹಣ್ಣು ಹಾಕಿ ತೊಳೆದರು. ಮೊದಲ ಬಾರಿಗೆ ಕಾರಂತರಿಗೆ ಪ್ರಶಸ್ತಿಗಾಗಿ ಜೊಲ್ಲು ಸುರಿಸುವವರ ನೇರ ಪರಿಚಯ ಆಗಿ ಹೋಗಿತ್ತು.
“ಶಿವರಾಮ ಕಾರಂತ ಪೀಠ’ ಮಂಗಳೂರಿನಲ್ಲಿ ಸ್ಥಾಪನೆಯಾಯಿತು. ಹಾಗಾಗಿ, ನನಗೆ ಮೇಲಿಂದ ಮೇಲೆ ಕಾರಂತರ ಜೊತೆ ಮಾತನಾಡುವ, ಕೈ ಕುಲುಕುವ, ಅವರೊಟ್ಟಿಗೆ ಓಡಾಡುವ ಅವಕಾಶ ಸಿಕ್ಕಿತು. ಕಾರಂತರ ಲೇಖನಗಳ ಸಮಗ್ರ ಸಂಗ್ರಹದ ಬಹು ಸಂಪುಟಗಳನ್ನು ತರಲು ಮಂಗಳೂರಿನ ಈ ಪೀಠ ಸಜ್ಜಾಯಿತು. ಅದರ ಎÇÉಾ ಹೆಜ್ಜೆಗಳಿಗೂ ನಾನು ಕಣ್ಣಾಗಿ¨ªೆ. ಪುತ್ತೂರಿನ ಕಾರಂತಜ್ಜರ ಮನೆಯಂತೂ ನನಗೆ ನನ್ನದೇ ಮನೆ ಎನ್ನುವಂತೆ ಆಗಿಹೋಗಲು ಕಾರಣರಾದದ್ದು ಮೋಹನ್ ಸೋನ, ಐ. ಕೆ. ಬೊಳುವಾರು ಹಾಗೂ ಬಾಲವನ ಚಂದ್ರು. ಮನಸ್ಸಿಗೆ ಒಂದಿಷ್ಟು ಆಯಾಸ ಅನಿಸಿದಾಗೆಲ್ಲ ನಾನು ಬಾಲವನ ತಲುಪಿಕೊಳ್ಳುತ್ತಿ¨ªೆ. ಕಾರಂತರ ಪ್ರಿಂಟಿಂಗ್ ಪ್ರಸ್, ಕಾರಂತರ ಮನೆ, ತೋಟ ಎÇÉಾ ಅಡ್ಡಾಡುತ್ತ ಅಲ್ಲಿಯೇ ಮಕ್ಕಳ ಜೊತೆ ಚಿಲಿಪಿಲಿ ಸದ್ದು ಮಾಡುತ್ತ, ಎನ್.ಎಸ್. ಶಂಕರ್ ಕ್ಯಾಮೆರಾ ತಂಡದೊಡನೆ ಬಂದಾಗ ಬಾಲವನ ನನ್ನದೇನೂ ಎನ್ನುವಂತೆ ಬಾಗಿಲು ಸರಿಸಿ, ಓಡಾಡಿದ್ದೂ ಉಂಟು. ಬೋಳಂತಕೋಡಿ ಈಶ್ವರ ಭಟ್ಟರಿಂದಾಗಿ ಲೀಲಾ ಕಾರಂತರ ನೆನಪುಗಳು ದಕ್ಕಿದವು, ನನ್ನ “ಈಟಿವಿ’ ಕ್ಯಾಮೆರಾ ಕಾರಂತರ ಮಗಳು ಕ್ಷಮಾ ರಾವ್ ಅವರ ಒಡಿಸ್ಸಿ ನೃತ್ಯವನ್ನು ಸೆರೆ ಹಿಡಿಯಿತು, ಗೆಳೆಯ ಪ್ರವೀಣ್ ಭಾರ್ಗವ್‌ನಿಂದಾಗಿ ಉÇÉಾಸ ಕಾರಂತರ ಸಹವಾಸವೂ ದೊರೆಯಿತು. ಕಾರಂತರು ಗೆಜ್ಜೆ ಕಟ್ಟಿ ಕುಣಿದದ್ದನ್ನು ಎದುರಿಗೆ ಕುಳಿತು ನೋಡುವ, ಅವರು ಹಾಗೆ ರೂಪಿಸಿದ ಬ್ಯಾಲೆಗಳು ದೇಶ ವಿದೇಶ ತಿರುಗಿ ಚರ್ಚೆಗೊಳಗಾದದ್ದನ್ನು ಅವರಿಂದಲೇ ಆಲಿಸುವ, ಆ ಪ್ರದರ್ಶನಗಳ ವಿಡಿಯೋಗಳನ್ನು ಅವರ ಜೊತೆ ಕುಳಿತು ನೋಡುವ ಅಪರೂಪದ ಕ್ಷಣಗಳು ನನಗೆ ಸಿಕ್ಕಿ ಹೋದವು. – ಜಿ. ಎನ್. ಮೋಹನ್