Advertisement

ಶಿರಸಿ: ಮನೆ ಗೋಡೆ ಕುಸಿದು ಮಹಿಳೆ ಸಾವು: ಸ್ಥಳಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ-ಸಾಂತ್ವನ

08:30 AM Jul 14, 2021 | Team Udayavani |

ಶಿರಸಿ: ಗುಡ್ನಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ಆಕಸ್ಮಿಕವಾಗಿ ಮನೆ ಗೋಡೆ ಕುಸಿದು,  ಯಶೋಧಾ ಬಂಗಾರಿ ಗೌಡ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಸಾಂತ್ವನ ನೀಡಿದರು.

Advertisement

ಸ್ವತಃ ಮಂಗಳವಾರ ಮೃತರ ಮನೆಗೆ ಭೇಟಿ ನೀಡಿದ ಹೆಬ್ಬಾರ್,  ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಅನ್ಯ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ,  ಶಿವರಾಮ ಹೆಬ್ಬಾರ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಅಂತ್ಯ ಸಂಸ್ಕಾರಕ್ಕೆ ವೈಯಕ್ತಿಕ ಧನಸಹಾಯವನ್ನು ನೀಡಿದರು. ಹಾಗೂ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿ ಮುಂದಿನ 48 ಗಂಟೆಗಳ ಒಳಗಾಗಿ ಪರಿಹಾರ ಧನವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್ ಎಂ.ಆರ್.ಕುಲಕರ್ಣ, ಡಿ.ವೈ,ಎಸ್.ಪಿ ರವಿ ನಾಯ್ಕ, ಸಿ.ಪಿ.ಆಯ್. ರಾಮಚಂದ್ರ ನಾಯಕ ಬನವಾಸಿ ಪಿ.ಎಸ್. ಆಯ್ ಹಾಗೂ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಳೀಯ ಮುಖಂಡರು ಹಾಗೂ ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next