Advertisement

ಜಿಲ್ಲಾದ್ಯಂತ ಶಿವನಾಮಸ್ಮರಣೆ

04:38 PM Feb 22, 2020 | Suhan S |

ಮಂಡ್ಯ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಜಿಲ್ಲೆಯ ಎಲ್ಲಾ ಶಿವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ರುದ್ರಾಭಿಷೇಕ, ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾ ಭಕ್ತಿಯಿಂದ ಸಾಂಗೋಪಸಾಂಗವಾಗಿ ನಡೆಯಿತು.

Advertisement

ಹಬ್ಬದ ಪ್ರಯುಕ್ತ ಭಕ್ತಾದಿಗಳು ಮುಂಜಾನೆಯಿಂದಲೇ ಶಿವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮಹಿಳೆಯರು ಜಾಗರಣೆ ವ್ರತಾಚರಣೆ ಮಾಡಿದರು. ಶಿವರಾತ್ರಿ ಅಂಗವಾಗಿ ದೇವಾಲ ಯಗಳಲ್ಲಿ ಹರಿಕಥೆ, ಶಿವ ಪಾರಾಯಣ, ಜಪ-ತಪಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ರಾತ್ರಿಯಿಡೀ ಸಂಭ್ರಮದಿಂದ ನೆರವೇರಿದವು.

ಅರಕೇಶ್ವರ ಸ್ವಾಮಿಗೆ ವಿಶೇಷ ಪೂಜೆ: ಇಲ್ಲಿನ ಅರಕೇಶ್ವರ ಗರದ ಶ್ರೀ ಅರಕೇಶ್ವರಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆ 4.30ರಿಂದಲೇ ದೇವರಿಗೆ ವಿಶೇಷ ಪೂಜೆ, ಅಭಿಷೇಕ ನಡೆದವು. ಕ್ಷೀರ, ಮೊಸರು, ಎಳನೀರು, ಗಂಧ, ಜೇನುತುಪ್ಪ, ಸಕ್ಕರೆ, ನಿಂಬೆಹಣ್ಣು, ಪಂಚಾಮೃತಾಭಿಷೇಕ, ಅರಿಶಿನ-ಕುಂಕುಮ, ಬಿಲ್ವಪತ್ರ ಅರ್ಚನೆ ಮಾಡಲಾಯಿತು. ಮುಂಜಾನೆಯಿಂದಲೇ ಭಕ್ತರ ದಂಡು ದೇವಾಲ  ಯದತ್ತ ಹರಿದು ಬಂದಿತ್ತು. ಶ್ರೀ ಸ್ವಾಮಿಗೆ ಪ್ರಥಮ ಪೂಜೆ ಸಲ್ಲಿಸಿ ತೀರ್ಥ-ಪ್ರಸಾದ ಸ್ವೀಕರಿಸಿ ಧನ್ಯತಾ ಭಾವದಿಂದ ನಡೆಯುತ್ತಿದ್ದರು. ದೇವಾಲಯದಲ್ಲಿ ರಾತ್ರಿ ಪೂರ್ತಿ ಶಿವ ಪಾರಾಯಣ ನಡೆಯಿತು.

ನಗರದ ಪ್ರಮುಖ ಪುರಾಣ ಪ್ರಸಿದ್ಧ ದೇವಾಲ  ಯಗಳಲ್ಲಿ ಒಂದಾಗಿರುವ ಶ್ರೀ ಸಕಲೇಶ್ವರಸ್ವಾಮಿ ದೇವಾಲಯದಲ್ಲೂ ಬೆಳಗಿನಿಂದಲೇ ವಿಶೇಷ ಪೂಜಾ-ಕೈಂಕರ್ಯ ನಡೆಸಲಾಯಿತು. ಬೆಳ್ಳಿ ನಾಗಾ  ಭರಣ ಧರಿಸಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಶಂಕರನಗರದಲ್ಲಿರುವ ಶ್ರೀ ಮಲೈ ಮಹ  ದೇಶ್ವರ ಸ್ವಾಮಿ, ಶಂಕರಮಠದ ಆದಿಚುಂಚನಗಿರಿ ಶಾಖಾ ಮಠದಲ್ಲಿರುವ ಶ್ರೀ ಗವಿಗಂಗಾಧರೇಶ್ವರ ಸ್ವಾಮಿಗೆ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಅಭಿಷೇಕ, ಪೂಜೆ, ಅಲಂಕಾರ ನಡೆಸಲಾಗಿತ್ತು. ಬೆಳಗ್ಗೆಯಿಂದಲೇ ನೂರಾರು ಭಕ್ತರು ದೇಗುಲಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದರು.

ಶ್ರೀ ಶನೇಶ್ವರ ದೇವಸ್ಥಾನ: ನಗರದ ಹೊಸಹಳ್ಳಿ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಸಂಜೆ 5 ಗಂಟೆಗೆ ಹೂ ಹೊಂಬಾಳೆ, ಬಾಯಿಬೀಗ ಹಾಗೂ ವಿಶೇಷ ಪುಷ್ಪಾಲಂಕಾರ ದೊಂದಿಗೆ ಉತ್ಸವ ಮೂರ್ತಿ ದರ್ಶನ ಏರ್ಪಡಿ ಸಲಾಗಿತ್ತು. ರಾತ್ರಿ 9.30ರಿಂದ ಬೆಳಗಿನ ಜಾವ 5 ಗಂಟೆವರೆಗೆ 1001 ಕಳಶ, ಪೂಜಾ ಕುಣಿತ, ಡೊಳ್ಳು ಕುಣಿತ, ಹೂವಿನ ಮಾರಮ್ಮನ ದೇವಾ ಲಯ ದಲ್ಲಿ ಹೂ ಹೊಂಬಾಳೆ, ನಾಟಕ, ಭರತನಾಟ್ಯ, ಭಕ್ತಿಗೀತೆಗಳ ಗಾಯನ ಹರಿಕಥೆ ಕಾರ್ಯಕ್ರಮ ನಡೆಯಿತು.

Advertisement

ಬೆಳಗ್ಗೆ 6 ಗಂಟೆಯಿಂದ ಸ್ವಾಮಿಗೆ ಉಯ್ನಾಲೆ, ಊರಿನ ರಾಜ ಬೀದಿಗಳಲ್ಲಿ ಭವ್ಯ ಮೆರವಣಿಗೆ, ಬೆಳಗ್ಗೆ 7.30ಕ್ಕೆ ತಲೆಮುಡಿ, 8 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ಮಹದೇಶ್ವರಸ್ವಾಮಿ ದೇವಸ್ಥಾನ: ಹಾಲಹಳ್ಳಿಯ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಹಬ್ಬದ ಪೂಜಾ ಮಹೋತ್ಸವ ನಡೆಯಿತು. ಸಂಜೆ 7 ಗಂಟೆಗೆ ಹಾಲಹಳ್ಳಿ ಚನ್ನಯ್ಯ ಪಾರ್ಕ್‌ ಮುಂಭಾಗವಿರುವ ನಾಗರಗುಡಿಯಿಂದ ಶ್ರೀ ಮಹದೇಶ್ವರ ಸ್ವಾಮಿ ದೇವರ ಉತ್ಸವ ದೊಂದಿಗೆ ಮೀಸಲು ನೀರು ತರಲಾಯಿತು. ನಂತರ ವಿಶೇಷ ಪೂಜೆ, ಅಭಿಷೇಕ ನಡೆದವು.

Advertisement

Udayavani is now on Telegram. Click here to join our channel and stay updated with the latest news.

Next