Advertisement

ಅವಳಿ ಜಿಲ್ಲೆಗೆ ಎತ್ತಿನ ಹೊಳೆ ನೀರು

01:57 PM Mar 02, 2022 | Team Udayavani |

ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಫ್ಲೋರೈಡ್‌ ಮುಕ್ತ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ಭಾಗದ ಜನರಿಗೆ ಎತ್ತಿನಹೊಳೆ ಮೂಲಕ ನೀರು ಹರಿಸಲು ಅಗತ್ಯ ಅನುದಾನವನ್ನು ಒದಗಿಸಿ ಭೂ ಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದರು.

Advertisement

ತಾಲೂಕಿನ ನಂದಿ ಗ್ರಾಮದ ಶ್ರೀ ಭೋಗನಂದೀಶ್ವರ ದೇವಾಲಯದ ಆವರಣದಲ್ಲಿ ಶಿವರಾತ್ರಿ ಅಂಗವಾಗಿ ಆಯೋಜಿಸಿದ್ದ ಶಿವೋತ್ಸವ-2022ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ತುಮಕೂರುಜಿಲ್ಲೆಯ ಪಾವಗಡ ಮತ್ತು ಕೋಲಾರ ಜಿಲ್ಲೆಯ ಮುಳಬಾಗಿಲು ವರೆಗೆಕುಡಿಯುವ ನೀರಿನ ಸಮಸ್ಯೆಯ ಕುರಿತು ತಮಗೆ ಅರಿವು ಇದೆ. ಈ ಭಾಗದಜನರಿಗೆ ಶುದ್ಧ ಕುಡಿವ ನೀರು ಪೂರೈಕೆ ಮಾಡಲು ಈ ಬಾರಿಯ ಬಜೆಟ್‌ನಲ್ಲಿ ಅಗತ್ಯ ಹಣಕಾಸಿನ ವ್ಯವಸ್ಥೆಯನ್ನು ಒದಗಿಸಿ ಯೋಜನೆಯನ್ನು ಕ್ರಮಬದ್ದವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.

ತಾವು ಕೋಲಾರ ಜಿಲ್ಲೆಗೆ ಭೇಟಿ ನೀಡಿದಾಗ ಕುಡಿಯುವ ನೀರಿನಲ್ಲಿ ಫ್ಲೋರೈಡ್‌ ಅಂಶ ಪತ್ತೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಪಶ್ಚಿಮವಾಹಿನಿಯ ಮೂಲಕ ವ್ಯರ್ಥವಾಗಿ ಸಮುದ್ರ ಪಾಲಾಗುತ್ತಿರುವ ನೀರನ್ನು ಈಭಾಗಕ್ಕೆ ನೀರು ಪೂರೈಕೆ ಮಾಡಲು ಯೋಜನೆಯನ್ನು ರೂಪಿಸಲಾಗಿತ್ತು. ಆದರೆ,ಹಿಂದಿನ ಎತ್ತಿನಹೊಳೆ ಯೋಜನೆಯನ್ನು 2010ರಲ್ಲಿ ಸಿದ್ದಪಡಿಸಿದರು ಹೊರತುಯೋಜನೆಯ ಅನುಷ್ಠಾನಗೊಳಿಸಲು ಇಚ್ಛಾಶಕ್ತಿ ತೋರಲಿಲ್ಲ ಎಂದು ಕಾಂಗ್ರೆಸ್‌ ನಾಯಕರಿಗೆ ಪರೋಕ್ಷವಾಗಿ ಸಿಎಂ ಟಾಂಗ್‌ ಕೊಟ್ಟರು.

ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ, ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಆಶ್ರಮದ ಶ್ರೀ ಮಧುಸುಧನ್‌ ಸಾಯಿ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್‌, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್‌ ,ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ, ರಾಜ್ಯ ಮಾವು ಅಭಿವೃಧ್ದಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್‌, ನಗರಸಭೆಯ ಅಧ್ಯಕ್ಷ ಡಿ.ಎಸ್‌.ಆನಂದ್‌ರೆಡ್ಡಿ(ಬಾಬು),ಜಿಲ್ಲಾಧಿಕಾರಿ ಆರ್‌.ಲತಾ,ಜಿಪಂ ಸಿಇಒ ಪಿ.ಶಿವಶಂಕರ್‌, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಅಪರ ಜಿಲ್ಲಾಧಿಕಾರಿಹೆಚ್‌.ಅಮರೇಶ್‌, ಡಿವೈಎಸ್ಪಿ ವಾಸುದೇವ್‌, ತಹಶೀಲ್ದಾರ್‌ ಗಣಪತಿ ಶಾಸ್ತ್ರಿ, ನಗರಸಭಾ ಸದಸ್ಯರು ಇತರರಿದ್ದರು.

ಅರ್ಕಾವತಿ ನದಿ ಪುನಶ್ವೇತನಕ್ಕೆ ಒತ್ತು :

Advertisement

ಜಿಲ್ಲೆಯಲ್ಲಿ ಉಗಮವಾಗುವ ಅರ್ಕಾವತಿ ನದಿಯನ್ನು ಪುನಶ್ಚೇತನಗೊಳಿಸಲು ಅಗತ್ಯ ನೆರವುನೀಡಿ ಪುನಃ ನದಿಯ ನೀರು ಈ ಭಾಗದ ಜನರಿಗೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಎಂದು ಭರವಸೆ ನೀಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತ ಮಾಲಾ 01ಮತ್ತು 02 ಆರಂಭಿಸಿದ್ದಾರೆ ಅದೇ ರೀತಿಯಲ್ಲಿ ರಾಜ್ಯದ ಕರಾವಳಿಯ ಬಂದರ್‌ಗಳನ್ನುಜೋಡಿಸುವ ಸಾಗರಮಾಲಾ ಮತ್ತು ಪರ್ವತ್‌ ಮಾಲೆಯ ಮೂಲಕ ಜಿಲ್ಲೆಯ ಐತಿಹಾಸಿಕನಂದಿಬೆಟ್ಟ ಮತ್ತು ಅಂಜಾನಾದ್ರಿ ಬೆಟ್ಟಕ್ಕೆ ರೋಪ್‌ವೇ ಸೌಲಭ್ಯ ಕಲ್ಪಿಸಲು ಯೋಜನೆಯನ್ನು ರೂಪಿಸಲಾಗಿದೆ ಅದನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಶಂಕರ್‌ನಾಗ್ ಕಂಡ ಕನಸು ನನಸು: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮಕ್ಕೆ ರೋಪವೇ ನಿರ್ಮಿಸಲು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರಿಗೆ ನಟ ಶಂಕರ್‌ನಾಗ್‌ ಅವರು ಪ್ರಸ್ತಾವನೆಯನ್ನು ಸಲ್ಲಿಸಿದರು ಆದರೇ ಅದು ಅನುಷ್ಠಾನವಾಗಿರಲಿಲ್ಲ ಆದರೇ ಅವರ ಕನಸುನನಸು ಮಾಡಲು 90 ಕೋಟಿ ರೂ.ಗಳ ಯೋಜನೆಯನ್ನು ಸಿದ್ಧಪಡಿಸಲಾಗಿದೆ ನನ್ನ ಮಿತ್ರ ಯೋಜನೆಯನ್ನು ನನಸು ಮಾಡುತ್ತಿರುವುದು ಸಂತಸ ತಂದಿದೆ ಎಂದರು.ಅ

Advertisement

Udayavani is now on Telegram. Click here to join our channel and stay updated with the latest news.

Next