Advertisement

ಹಾನಗಲ್ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ

03:03 PM Oct 08, 2021 | Team Udayavani |

ಹಾವೇರಿ: ಜಿಲ್ಲೆಯ ಹಾನಗಲ್ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

Advertisement

ಶಿವರಾಜ ಸಜ್ಜನರ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಹಾನಗಲ್ ಪಟ್ಟಣದ ಕುಮಾರೇಶ್ವರ ಮಠದಿಂದ ಮೆರವಣಿಗೆ ಆರಂಭವಾಗಿತ್ತು.

ಇದನ್ನೂ ಓದಿ:ಖರ್ಗೆಯವರನ್ನೇ ಸಿಎಂ ಮಾಡಲು ಸೂಚಿಸಿದ್ದೆ, ಆದರೆ… : ಕಾಂಗ್ರೆಸ್ ನಾಯಕರಿಗೆ ದೇವೇಗೌಡ ಚಾಟಿ

ಸಚಿವರಾದ ಮುರುಗೇಶ ನಿರಾಣಿ, ಶಿವರಾಮ ಹೆಬ್ಬಾರ, ಬಿ.ಸಿ.ಪಾಟೀಲ, ರಾಜುಗೌಡ, ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಅನೇಕರು ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next