Advertisement
ಹೌದು, ಶಿವ ತೇಜಸ್ ತಮ್ಮ ಹೊಸ ಚಿತ್ರಕ್ಕೆ “ಲೌಡ್ ಸ್ಪೀಕರ್’ ಎಂದು ಹೆಸರಿಟ್ಟಿದ್ದಾರೆ. ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಸೋಶಿಯಲ್ ಮೀಡಿಯಾಗಳ ಬಳಕೆ ಹೆಚ್ಚಾಗುತ್ತಿದ್ದಂತೆ ಯುವ ಜನತೆ ಯಾವ ರೀತಿ ದಾರಿ ತಪ್ಪುತ್ತದೆ, ಸಂಬಂಧಗಳು ಹೇಗೆ ಮೌಲ್ಯ ಕಳೆದುಕೊಳ್ಳುತ್ತವೆ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.
ಚಿತ್ರದಲ್ಲಿ ನೀನಾಸಂ ಭಾಸ್ಕರ್, ಅಭಿಷೇಕ್, ಸುಮಂತ್ ಭಟ್, ಕಾರ್ತಿಕ್ ರಾವ್, ಕಾವ್ಯಾ ಶಾ, ಅನುಷಾ, ದಿಶಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಜೊತೆಗೆ ರಂಗಾಯಣ ರಘು ದತ್ತಣ್ಣ ನಟಿಸುತ್ತಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರ ಶಿಷ್ಯ ಹರ್ಷವರ್ಧನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ. ಈ ಚಿತ್ರಕ್ಕೆ ಡಾ.ಕೆ.ರಾಜು ನಿರ್ಮಿಸುತ್ತಿದ್ದಾರೆ. “ಧೈರ್ಯಂ’ ಚಿತ್ರವನ್ನು ಇವರೇ ನಿರ್ಮಿಸಿದ್ದರು.