Advertisement

ಕುರುಗೋಡು: ತಹಸೀಲ್ದಾರ್ ಕಾರ್ಯಾಲಯದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ

01:50 PM Jan 15, 2022 | Team Udayavani |

ಕುರುಗೋಡು: ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡು ಯುವ ಪೀಳಿಗೆಗೆ ಪರಿಚಯಸಲು ಮುಂದಾಗಬೇಕು ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಹೇಳಿದರು.

Advertisement

ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದರು.

ಅಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.

ಪಟ್ಟಣದ ಮುಖಂಡರು ಮಾತನಾಡಿ, 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಅವರು ಸಮಾಜದಲ್ಲಿ ಕೆಲಸ ಮಾಡಿದ್ದಾರೆ ಎಂದರು.

ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಮಲ್ಲೇಶಪ್ಪ, ತಹಸೀಲ್ದಾರ್ ಕಚೇರಿಯ ಸಿಬ್ಬಂದಿಗಳು, ಬೋವಿ ಸಮುದಾಯದ ಮುಖಂಡರು, ಪಟ್ಟಣದ ಮುಖಂಡರು ಹಾಗೂ ವಿವಿಧ ಸಂಘಟನೆಯ ಮುಖಂಡರು ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next