Advertisement
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿಯ ಭೋಗ ನಂದೀಶ್ವರ ಜಾತ್ರೆ ಆಯೋಜನೆ ಕುರಿತ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮಾರ್ಚ್01 ರಿಂದ ನಂದಿಯಲ್ಲಿ ಶಿವರಾತ್ರಿಯಂದು ಶಿವೋತ್ಸವ ಕಾರ್ಯಕ್ರಮವನ್ನು ರಾಜ್ಯ ಮಟ್ಟದ ಕಾರ್ಯಕ್ರಮವನ್ನಾಗಿ ಮೈಸೂರು ದಸರಾ ಹಾಗೂ ಹಂಪಿ ಉತ್ಸವದ ರೀತಿ ಆಚರಿಸಲಾಗುವುದು ಇದಕ್ಕೆ ಪೂರ್ವ ಭಾವಿಯಾಗಿ ಈ ಸಾಲಿನಲ್ಲಿಯೂ ಹಲವು ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ವಿಜೃಂಭಣೆ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.
Related Articles
Advertisement
ಶಿವೋತ್ಸವ ಜಾತ್ರೆಯಲ್ಲಿ ಭಕ್ತಾಧಿಗಳಿಗಾಗಿ ಕುಡಿಯುವ ನೀರಿನ ಪೂರೈಕೆ, ಅನ್ನ ಸಂತರ್ಪಣೆ ಸೇರಿದಂತೆ ಸ್ವಚ್ಛತೆಗೆ ಯಾವುದೇ ಲೋಪವಾಗದಂತೆ ಕ್ರಮ ತೆಗದುಕೊಳ್ಳಬೇಕು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಜಾತ್ರಾ ಪ್ರಯುಕ್ತ ಹೆಚ್ಚಿನ ಬಸ್‍ಗಳ ವ್ಯವಸ್ಥೆ ಮಾಡಬೇಕು. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಹಾಗೂ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಪ್ರದರ್ಶನಕ್ಕಾಗಿ ಮತ್ತು ವಿವಿಧ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸುವ ಆಹಾರೋತ್ಪನ್ನಗಳನ್ನು ಪ್ರದರ್ಶಿಸುವ ಉದ್ದೇಶಕ್ಕಾಗಿ ವಿವಿಧ ರೀತಿಯ ಮಳಿಗೆಗಳನ್ನು ತೆರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು, ನಂದಿ ಜಾತ್ರೆಯನ್ನು ಈ ಬಾರಿ ಸುಸಜ್ಜಿತವಾಗಿ ಹಾಗೂ ಭಕ್ತಿಪೂರ್ವಕವಾಗಿ ಆಯೋಜಿಸಲು ಹಲವು ಸಮಿತಿಗಳನ್ನು ರಚಿಸಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಾರ್ಯಾಭಾರ ಹಂಚಿಕೆ ಮಾಡಿದರು. ಆಹಾರ, ಪ್ರಚಾರ, ರಿಸೆಪ್ಷನ್, ಹೂವು ಮತ್ತು ದೀಪಾಂಕಾರ, ಸನ್ಮಾನ, ಹೆಲ್ಪ್ ಡೆಸ್ಕ್ ,ಸಾರಿಗೆ ವ್ಯವಸ್ಥೆ ,ವೇದಿಕೆ ಸಿದ್ಧತೆಗಾಗಿ ವಿವಿಧ ಸಮಿತಿಗಳನ್ನು ರಚಿಸಿ ಸಮಿತಿಗೆ ಒಬ್ಬರನ್ನು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಡಿವೈಎಸ್ಪಿ ವಾಸುದೇವ್, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್,ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಆರ್ ಕಬಾಡೆ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು. ಸಭೆಯಲ್ಲಿ ಫೆಬ್ರವರಿ 27 ರಂದು ನಡೆಯಲಿರುವ ಪೋಲಿಯೋ ಲಸಿಕಾಕರಣ ಸಂಬಂಧ ಕರಪತ್ರಗಳನ್ನು ಸಚಿವರು ಬಿಡುಗಡೆ ಮಾಡಿದರು.