Advertisement

ಮಣಿಪಾಲ:ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಶಿವರಾತ್ರಿಯ ಸಂಭ್ರಮ

05:14 PM Feb 18, 2023 | Team Udayavani |

ಮಣಿಪಾಲ : ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶನಿವಾರ ಮಹಾಶಿವರಾತ್ರಿ ಹಬ್ಬವನ್ನು ವಿಶೇಷ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಒಂದೆಡೆ ಶಿವರಾತ್ರಿಯ ವಿಶೇಷ ಪೂಜೆ ನಡೆಯುತ್ತಿದ್ದರೆ ಇನ್ನೊಂದೆಡೆ ಶ್ರೀ ಕ್ಷೇತ್ರದಲ್ಲಿ ಸಂಪನ್ನಗೊಳ್ಳಲಿರುವ ”ಅತಿರುದ್ರ ಮಹಾಯಾಗ”ಕ್ಕೆ ಭರದ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

Advertisement

ಶನಿವಾರ ಬೆಳಗಿನ ಜಾವದಿಂದಲೂ ಸಾವಿರಾರು ಭಕ್ತರು ದೇಗುಲಕ್ಕೆ ಆಗಮಿಸಿ ಶ್ರೀ ಉಮಾಮಹೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಫೆ. 22ರಿಂದ ಮಾ. 5ರ ವರೆಗೆ ಅತಿರುದ್ರ ಮಹಾಯಾಗ ನೆರವೇರಲಿದೆ. ಮಾರ್ಚ್ 04, ಶನಿವಾರ ಸಾಯಂಕಾಲ ಶೃಂಗೇರಿ ಶಾರದಾ ಪೀಠದ ಶ್ರೀಗಳಾದ ವಿಧುಶೇಖರ ಭಾರತೀ ಸ್ವಾಮೀಜಿಯವರನ್ನು ಭವ್ಯ ಶೋಭಾಯಾತ್ರೆ ಮೂಲಕ ಶಿವಪಾಡಿ ಶ್ರೀ ಉಮಾ ಮಹೇಶ್ವರ ಕ್ಷೇತ್ರಕ್ಕೆ ಬರಮಾಡಿಕೊಂಡು ಧೂಳಿ ಪಾದಪೂಜೆ ಬಳಿಕ ಸಾರ್ವಜನಿಕ ಸಮಾರಂಭ, ರಾತ್ರಿ ಚಂದ್ರಮೌಳೀ ದೇವರ ಪೂಜೆ, ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ ಸೇವೆ ನಡೆಯಲಿದೆ. ಮಾರ್ಚ್ 05, ಆದಿತ್ಯವಾರ ಬೆಳಗ್ಗೆ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಅತಿ ರುದ್ರ ಮಹಾಯಾಗ ಪೂರ್ಣಾಹುತಿ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next