ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಗೋಹತ್ಯೆ ನಿಷೇಧ ಮಸೂದೆಯನ್ನು ರಾಜ್ಯಪಾಲರ ಸಹಿಗೆ ಕಳುಹಿಸಿತ್ತು. ಅಂದಿನ ರಾಜ್ಯಪಾಲರಾಗಿದ್ದ ಕಾಂಗ್ರೆಸ್ ಏಜೆಂಟ್ ಎಚ್.ಆರ್.ಭಾರದ್ವಾಜ್ ಅದನ್ನು ತಿರಸ್ಕರಿಸಿದ್ದರು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಅವರ ಹೇಳಿಕೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.
ಶನಿವಾರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರು ಗೋಹತ್ಯೆ ನಿಷೇಧದ ಪರವಾಗಿದ್ದು, ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಜನರ ಆಸೆ ಈಡೇರಿಸುತ್ತೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಮುಖವಾಡ ಈಗ ಬಯಲಾಗಿದೆ. ಚುನಾವಣೆ ಬಂದಾಗ ಹನುಮ, ರಾಮ ಎಲ್ಲರೂ ನೆನಪಾಗುತ್ತಿದ್ದಾರೆ. ಕಳೆದ ವರ್ಷ ಬಿಜೆಪಿ ಸಂಸದರು ಹನುಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇದೇ ಸಿದ್ದರಾಮಯ್ಯ ಅಡ್ಡಿಪಡಿಸಿದ್ದರು. ಈಗ ಮಠ-ಮಂದಿರಗಳಿಗೆ ಭೇಟಿ ನೀಡಿ ಹಿಂದೂಗಳ ಮತಗಳನ್ನು ಸೆಳೆಯಲು ನಾಟಕ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯನವರ ಹನುಮ ಜಯಂತಿ ಟ್ವೀಟ್‌ಗೆ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಪûಾಂತರಿಗಳ ಪಕ್ಷ ಎಂದು ಟೀಕಿಸಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ ಟೀಕಿಸಿದ್ದಾರೆ. ಆನಂದ್‌ಸಿಂಗ್ ಮತ್ತು ನಾಗೇಂದ್ರ ಯಾವ ಪಕ್ಷದವರು ಎಂಬುದಕ್ಕೆ ರಾಮಲಿಂಗಾರೆಡ್ಡಿ ಅವರು ಉತ್ತರ ಕೊಡಲಿ ಎಂದು ಸವಾಲು ಹಾಕಿದರು.
ಹೆಬ್ಟಾಳ್ಕರ್ ವಿರುದ್ಧ ಆರೋಪ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಚುನಾವಣಾ ಅಕ್ರಮ ಎಸಗುವಲ್ಲಿ ನಿಸ್ಸೀಮರಾಗಿದ್ದು, ಮತದಾರರಿಗೆ ಕುಕ್ಕರ್, ಗ್ಯಾಸ್ ಸ್ಟವ್ ಬೆಳಗಾವಿ ಜಿÇÉೆಯಲ್ಲಿ ಹಂಚುತ್ತಿದ್ದಾರೆ. ಈ ಹಿಂದೆ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಅಕ್ರಮ ಎಸಗಿರುವುದು ಜಗಜ್ಜಾಹೀರಾಗಿದೆ. ಹೀಗಾಗಿ ಚುನಾವಣಾ ಆಯೋಗ ಹೆಬ್ಟಾಳ್ಕರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.