Advertisement
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಹಮ್ಮಿಕೊಂಡಿರುವ ಯುವಕರ ನಡೆ- ಕೃಷಿಯ ಕಡೆ ಕಾರ್ಯಾಗಾರದಲ್ಲಿ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಗಳ ರಚನೆ ಮೂಲಕ ರೈತರಿಗೆ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ, ಸೂಕ್ತ ಬೆಲೆ ಜತೆಗೆ ಕೃಷಿ ಕಾರ್ಯಕ್ಕೆ ಬೇಕಾಗುವ ಮೂಲ ಸೌಕರ್ಯಗಳ ನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಆರ್ಥಿಕ ಸೌಲಭ್ಯ ಕಲ್ಪಿಸುವುದು ಇತರ ಹತ್ತಾರು ನಿಟ್ಟಿನ ಕಾರ್ಯಗಳು ಸಂಘಗಖ ಮುಖಾಂತರ ಕೃಷಿಯಲ್ಲಿ ಕ್ರಾಂತಿ ತರಲು ಉದ್ದೇಶಿಸಲಾಗುತ್ತಿದೆ ಎಂದು ವಿವರಣೆ ನೀಡಿದರು.
Related Articles
Advertisement
ಕ್ಲಸ್ಟರ್ ಆಧಾರಿತ ಮಾರುಕಟ್ಟೆ: ಈಗಾಗಲೇ ಕಾಫಿ, ಮೆಣಸು, ರೋಸ್ ಈರುಳ್ಳಿಗೆ ಸೃಷ್ಟಿಯಾದಂತೆ ರೈತರ ಇತರೆ ಉತ್ಪನ್ನಗಳಿಗೆ ಕ್ಲಸ್ಟರ್ ಆಧಾರಿತ ಮಾರುಕಟ್ಟೆಯನ್ನು ಸೃಷ್ಟಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಸಚಿವೆ ಶೋಭಾ ಹೇಳಿದರು.
ಜಿಡಿಪಿಯಲ್ಲಿ ಒಟ್ಟಾರೆ ಕೃಷಿ ಪಾಲು ಮುಂಚೆ ಶೇ 13ರಷ್ಟಿತ್ತು. ಅದನ್ನು ಶೇ 20ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಶೇ 25ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು.
ಇದನ್ನೂ ಓದಿ :ನಿಜಕ್ಕೂ ಮೇಲುಗೈ ಸಾಧಿಸಿದ್ದು ಯಾರು? ಪಂಜ್ ಶೀರ್ ಕಣಿವೆಯ ಯುದ್ಧದಲ್ಲಿ ಏನಾಯ್ತು…
ತೊಗರಿ ಬೆಂಬಲ ಬೆಲೆ ಹೆಚ್ಚಿಸುವ ವಿಶ್ವಾಸ: ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ತೊಗರಿ ಬೆಂಬಲ ಬೆಲೆ ಹೆಸರು, ಉದ್ದುಗಿಂತ ಕಡಿಮೆ ಇರುವುದು ತಮ್ಮ ಗಮನಕ್ಕಿದೆ. ಹೀಗಾಗಿ ಈ ಸಲತೊಗರಿಗೆ ಬೆಂಬಲ ಬೆಲೆ ಹೆಚ್ಚಿಸುವ ಪ್ರಸ್ತಾವ ಕೇಂದ್ರದ ಕೃಷಿ ಉತ್ಪನ್ನ ಗಳ ಬೆಲೆ ನಿಗದಿ ಆಯೋಗದ ಮುಂದಿದೆ ಎಂದು ಕೇಂದ್ರದ ಸಚಿವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ರೈತರಿಗೆ ಕೇಂದ್ರದಿಂದ ನೀಡಲಾಗುವ ವಿವಿಧ ಸಬ್ಸಿಡಿ ಯನ್ನು ನೇರವಸಗಿ ಅವರ ಖಾತೆಗೆ ಜಮಾ ಮಾಡುವ ಚಿಂತನೆ ಸಹ ನಡೆದಿದೆ ಎಂದರು. ಹರಿಯಾಣದಲ್ಲಿ ರೈತರ ಮೇಲಿನ ಲಾಠಿ ಪ್ರಹಾರ, ರಾಜ್ಯದ ಕೃಷಿ ಇಲಾಖೆಯಿಂದ ಸ್ಥಗಿತಗೊಂಡ ಹಲವು ಯೋಜನೆಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಸಚಿವೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಶಾಸಕರಾದ ಬಸವರಾಜ ಮತ್ತಿಮೂಡ, ಶಶೀಲ್ ಜಿ.ನಮೋಶಿ, ಕರ್ನಾಟಕ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ರೈತ ಮುಖಂಡ ಬಸವರಾಜ್ ಇಂಗಿನ್, ಬಿಜೆಪಿ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಗೋಷ್ಠಿಯಲ್ಲಿದ್ದರು.