ಚಿಕ್ಕಮಗಳೂರು : ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡುವ ನಿಟ್ಟಿನಲ್ಲಿ ಪಕ್ಷ ಬಿಟ್ಟವರನ್ನು ಮತ್ತೊಮ್ಮೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಶೋಭಾ ಕರಂದ್ಲಾಜೆ ಹೇಳಿದರು.
ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಚ್ಚಿನ ಸ್ಥಾನ ಗಳಿಸಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನೆಟ್ಟಿನಲ್ಲಿ ಪಕ್ಷ ತೊರೆದವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಪಕ್ಷವನ್ನು ಸದೃಢ ಮಾಡಬೇಕಾದ ಅಗತ್ಯವಿದೆ ಎಂದರು.
ದೇಶಕ್ಕೆ ಮತ್ತು ವಿಶ್ವಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಬಯಸುತ್ತಿದೆ. ವಿಶ್ವದ ಹಲವು ದೇಶಗಳು ಮೋದಿಯನ್ನು ಎದುರು ನೋಡುತ್ತೇವೆ. ಭಾರತವನ್ನು ಮತ್ತ ಷ್ಟು ಗಟ್ಟಿ ಮಾಡಲು ಎಲ್ಲರ ಸಹಕಾರ ಬೇಕು ಎಂದರು.
ಬಿಜೆಪಿ ಸರ್ಕಾರ ರಚನೆ ಮಾಡಲು ಶಾಸಕರು, ಮುಖಂಡರು ಬಿಜೆಪಿ ಸೇರಿದ್ದರು. ಅವರಿಗೆ ಬಿಜೆಪಿ ಅತ್ಯಂತ ಗೌರವದಿಂದ ನಡೆದುಕೊಂಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಅವರಿಗೆ ದೊಡ್ಡ ಖಾತೆ ಕೊಡಲಾ ಗಿತ್ತು. ಅವರನ್ನ ದೊಡ್ಡ-ದೊಡ್ಡ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ಮಾಡಲಾಗಿತ್ತು.ಪಕ್ಷದ ಎಲ್ಲಾ ಚಟುವಟಿಕೆಯಲ್ಲಿ ಅವರನ್ನ ತೊಡಗಿಸಿಕೊಳ್ಳಲಾಗಿತ್ತು ಎಂದರು.
ಇವತ್ತು ಸರ್ಕಾರ ಇಲ್ಲ, ಬಿಜೆಪಿ ಸೋತಿದೆ, ಆ ಸೋಲಿನಲ್ಲಿ ಎಲ್ಲರ ಪಾಲು ಇದೆ. ಮತ್ತೆ ಬಿಜೆಪಿಯನ್ನ ಕಟ್ಟಬೇಕು ಅನ್ನೋದು ನಮ್ಮ ಅಪೇಕ್ಷೆ. ನಮ್ಮ ಪಕ್ಷದ ತತ್ವ-ವಿಚಾರ ಒಪ್ಪಿ ಅವರು ಬಿಜೆಪಿ ಸೇರಿದ್ರು, ಅವರು ಇಲ್ಲೇ ಇರ್ತಾರೆ ಆ ವಿಶ್ವಾಸವಿದೆ.
ಅಧಿಕಾರಕ್ಕಾಗಿ ಬಂದ್ರು, ಅಧಿಕಾರ ಇಲ್ಲದಾಗ ಹೋದ್ರು ಎಂಬ ಕೆಟ್ಟ ಹೆಸರನ್ನ ಯಾರೂ ತೆಗೆದು ಕೊಳ್ಳಲ್ಲ ಅನ್ನೋ ವಿಶ್ವಾಸವಿದೆ ಎಂದ ಅವರು, ಅಧಿಕಾರ ಇದ್ದಾಗ ಎಲ್ಲಾ ಅನುಭವಿಸಿದ್ದೇವೆ, ಈಗ ಬಿಜೆಪಿಯನ್ನ ಗಟ್ಟಿ ಮಾಡಬೇಕಿದೆ ಎಂದರು.
ಇದನ್ನೂ ಓದಿ: Karnataka Politics: ಬಾಂಬೇ ಟೀಂ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ಯತ್ನಾಳ್