Advertisement

ಮೋದಿ ಸಂಪುಟ ಪುನರ್ ರಚನೆ : ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಪ್ರಮಾಣ ವಚನ

10:54 PM Jul 07, 2021 | Team Udayavani |

ನವ ದೆಹಲಿ : ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಇಂದು(ಬುಧವಾರ, ಜುಲೈ 7) ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

Advertisement

ರಾಷ್ಟ್ರೀಯ ಸ್ವಯಂಸೇವಕ ಸಂಘದದೊಂದಿಗೆ ಸದಾ ಸಕ್ರಿಯವಾಗಿ ಗುರುತಿಸಿಕೊಂಡ ಶೋಭಾ ಕರಂದ್ಲಾಜೆ ಸಂಸದೆ, ಮಾಜಿ ಸಚಿವೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೀಗೆ ವಿವಿಧ ಸ್ತರಗಳಲ್ಲಿ ಬಿಜೆಪಿಯ ಪ್ರಮುಖರಾಗಿ ಗುರುತಿಸಿಕೊಂಡವರು.

ಇದನ್ನೂ ಓದಿ : ಮೋದಿ ಸಂಪುಟ ಪುನರ್ ರಚನೆ : ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕಾರ

ರಾಜಕೀಯ ಹಾಗೂ ಸಾಮಾಜಿಕವಾಗಿ ತಮ್ಮ ಕಟ್ಟಾ ಹಿಂದುತ್ವದ ವಿಚಾರಧಾರೆಗಳಿಂದ, ಖಡಕ್ ಹೇಳಿಕೆಗಳಿಗೆ ಹೆಸರುವಾಸಿ ಹಲವು ಬಾರಿ ವಿವಾದಕ್ಕೂ ಈಡಾಗಿದ್ದರು.

ಶೋಭಾ ಕರಂದ್ಲಾಜೆ ರಾಜಕೀಯ ನಡೆ

Advertisement

*1994 ರಲ್ಲಿ ಬಂಟ್ವಾಳ ವಿಧಾನಸಭೆಗೆ ಸ್ಪರ್ಧಿಸಿದ್ದ ಶಕುಂತಲಾ ಶೆಟ್ಟಿಯವರ ಒಡನಾಟದಿಂದ ರಾಜಕೀಯ ಪ್ರವೇಶ.

*1997 ರಲ್ಲಿ ಉಡುಪಿ ಜಿಲ್ಲೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆ.

*1997 ರಲ್ಲಿ ಬೆಂಗಳೂರು ರಾಜಕೀಯ ರಂಗ ಪ್ರವೇಶ. 1999 ರಲ್ಲಿ ಬಿ.ಎಸ್.ಯಡಿಯೂರಪ್ಪನವರ ಸಂಕಲ್ಪ ರಥಯಾತ್ರೆಯಲ್ಲಿ ಭಾಗಿ. ನಂತರ ಹಲವು ಹೋರಾಟ, ಪಾದಯಾತ್ರೆ, ಸತ್ಯಾಗ್ರಹ ನಡೆಸಿದ ಅನುಭವ.

* 2000 ನೇ ಇಸವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ.

* 2004 ರಲ್ಲಿ ವಿಧಾನ ಪರಿಷತ್ ಸದಸ್ಯೆಯಾಗಿ ಆಯ್ಕೆ.

*2008 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕಿಯಾಗಿ ಆಯ್ಕೆ.

*ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕಾರ್ಯನಿರ್ವಹಣೆ.

*ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ನಿರ್ವಹಿಸಿದ ಅನುಭವ, ದಸರಾ ಮಹೋತ್ಸವ ನಿಭಾಯಿಸಿದ ಅನುಭವ.

*2009 ರಲ್ಲಿ ಕೆಲವು ರಾಜಕೀಯ ಭಿನ್ನಾಭಿಪ್ರಾಯಗಳಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ.

* 2010 ರಲ್ಲಿ ಕರ್ನಾಟಕ ಸರ್ಕಾರದಲ್ಲಿ ಇಂಧನ ಸಚಿವೆಯಾಗಿ ಅಧಿಕಾರ ಸ್ವೀಕಾರ.

*2012 ರಲ್ಲಿ ಬಿಜೆಪಿಯ ಕೆಲವು ನಾಯಕರೊಂದಿಗೆ ಭಿನ್ನಾಭಿಪ್ರಾಯ ಮೂಡಿ, ಬಿ ಎಸ್ ಯಡಿಯೂರಪ್ಪನವರು ಸ್ಥಾಪಿಸಿದ ಕರ್ನಾಟಕ ಜನತಾ ಪಕ್ಷ(ಕೆಜೆಪಿ)ಕ್ಕೆ ಸೇರ್ಪಡೆ.

*2013 ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಬಿಜೆಪಿಯ ಸುರೇಶ್ ಕುಮಾರ್ ವಿರುದ್ಧ ಸೋಲು.

*2013 ರಲ್ಲಿ ಬಿಜೆಪಿಯೊಂದಿಗೆ ಕೆಜೆಪಿ ವಿಲೀನ.

*2014 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗರಿಷ್ಠ ಮತಗಳ ಅಂತರದಿಂದ ಗೆಲುವು.

*2021ರಲ್ಲಿ ಮೋದಿ ಸರ್ಕಾರ 2.0ರಲ್ಲಿ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕಾರ.

ಇದನ್ನೂ ಓದಿ : ಬೇಸಿಗೆಯಲ್ಲಿ ನಿತ್ಯ ಸುರಿದು ಮಳೆಗಾಲದಲ್ಲಿ ನಾಪತ್ತೆಯಾದ ಮಳೆ | ಕೃಷಿಕರು ಕಂಗಾಲು

Advertisement

Udayavani is now on Telegram. Click here to join our channel and stay updated with the latest news.

Next