Advertisement

ಪ್ರವೀಣ್ ಹತ್ಯೆ: ಎನ್ ಐಎ ತನಿಖೆಗಾಗಿ ಶಾ ಅವರಿಗೆ ಕೇಂದ್ರ ಸಚಿವೆ ಶೋಭಾ ಪತ್ರ

08:02 PM Jul 27, 2022 | Team Udayavani |

ನವದೆಹಲಿ: ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯ ಕುರಿತು ಎನ್ ಐಎ ತನಿಖೆ ನಡೆಸುವಂತೆ ಮನವಿ ಸಲ್ಲಿಸಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

Advertisement

ದೇವಿ ಮತ್ತು ದೈವಗಳ ನಾಡಿನಲ್ಲಿ ಮತಾಂಧ ಶಕ್ತಿಗಳು ಅಟ್ಟಾಹಾಸ ತೋರಿದ್ದು, ಈ ಹಿಂದೆಯೂ ಇಂತಹ ಘಟನೆಗಳು ನಡೆದಿದ್ದವು, ಜಿಹಾದಿಗಳಿಂದ ಇಂತಹ ಘಟನೆಗಳು ಮರುಕಳಿಸುವ ಸಾಧ್ಯತೆ ಇದ್ದು, ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಪ್ರಕರಣವನ್ನು ಎನ್ ಐಎ ಗೆ ಹಸ್ತಾಂತರಿಸಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದ್ದಾರೆ.

”ಎನ್ಐಎಗೆ ಕೊಡಲು ಕೆಲ ಷರತ್ತುಗಳು ಇವೆ.ಆ ರೀತಿ ಇದ್ದರೆ , ಪ್ರಾಥಮಿಕ ತನಿಖೆ ಆಧರಿಸಿ, ಮುಂದೆ ಎನ್ಐಎ ಬಗ್ಗೆ ತೀರ್ಮಾನ ಮಾಡುತ್ತೇವೆ” ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next