Advertisement
ಖರೀದಿ ಕೇಂದ್ರ ಆರಂಭಿಸಿದರೆ ಮಧ್ಯವರ್ತಿಗಳ ಸಮಸ್ಯೆ ಸ್ವಲ್ಪ ಮಟ್ಟಿಗೆ ಪರಿಹಾರವಾಗಲಿದೆ ಎಂದರು.
ಬೆಂಬಲ ಬೆಲೆಗಿಂತ ಕಡಿಮೆಗೆ ಭತ್ತವನ್ನು ಯಾರೂ ಖರೀದಿಸದಂತೆ ಸರಕಾರ ಅಧ್ಯಾದೇಶ ಹೊರಡಿಸಬೇಕು. ರಸಗೊಬ್ಬರದ ದರ ಕಡಿತಗೊಳಿಸಬೇಕು, ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಯಂತ್ರಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಕೋಟ ರೈತಧ್ವನಿ ಸಂಘಟನೆ ವತಿಯಿಂದ ಈ ಸಂದರ್ಭ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಅಡಿಕೆಯಲ್ಲಿ ವಿಷಾಂಶ ಇಲ್ಲ:
ಮನವರಿಕೆಗೆ ವಕೀಲರ ನೇಮಕ ಅಡಿಕೆಯಲ್ಲಿ ವಿಷಕಾರಿ ಅಂಶ ಇಲ್ಲ ಎನ್ನುವುದನ್ನು ಸುಪ್ರಿಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಲು ಸೂಕ್ತ ವಕೀಲರನ್ನು ನೇಮಿಸುವ ಬಗ್ಗೆ ಪ್ರಧಾನಿಯವರ ಜತೆ ಚರ್ಚಿಸಿದ್ದು, ಪ್ರಧಾನಿ ಸ್ಪಂದಿಸಿ ಸೂಚನೆ ನೀಡಿದ್ದಾರೆ. ಶೀಘ್ರವೇ ಅನುಭವಿ ವಕೀಲರ ನೇಮಕವಾಗಲಿದೆ. ಅಡಿಕೆ ಅಭಿವೃದ್ಧಿ ಮಂಡಳಿ ರಚನೆಗಾಗಿ ಕೃಷಿಕರು ಬೇಡಿಕೆ ಸಲ್ಲಿಸಿದ್ದಾರೆ. ಆದರೆ ಕೇಂದ್ರ ಸರಕಾರ ಸದ್ಯ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ. ಮುಂದೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
Related Articles
Advertisement