Advertisement

ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆ: ಸಚಿವೆ ಶೋಭಾ ಮಹತ್ವದ ಪಾತ್ರ

05:35 PM Jan 19, 2022 | Team Udayavani |

ಬೆಂಗಳೂರು : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಮ್ ಸಿಂಗ್ ಯಾದವ್ ಅವರ ಕಿರಿಯ ಸೊಸೆ, ಅಪರ್ಣ ಯಾದವ್ ಬಿಜೆಪಿ ಸೇರ್ಪಡೆ ಪ್ರಕ್ರಿಯೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೂ ಮಹತ್ವದ ಪಾತ್ರ ವಹಿಸಿದ್ದಾರೆ.

Advertisement

ನವದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿಗೆ ರಾಷ್ಟ್ರೀಯ ಅಧ್ಯಕ್ಷರಾದ  ಜೆಪಿ ನಡ್ಡಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಮ್ಮುಖದಲ್ಲಿ ಅಪರ್ಣಾ ಯಾದವ್ ಸೇರ್ಪಡೆಗೊಂಡರು.

ಪಕ್ಷ ಸೇರ್ಪಡೆಗೆ ನಡೆದ ಮಾತುಕತೆಯ ವಿವಿಧ ಹಂತಗಳಲ್ಲಿ ಉತ್ತರ ಪ್ರದೇಶ ಚುನಾವಣೆ ಸಹ ಉಸ್ತುವಾರಿ ಶೋಭಾ ಕರಂದ್ಲಾಜೆ ಮಹತ್ವದ ಪಾತ್ರ ವಹಿಸಿದ್ದರು. ಪ್ರಧಾನಿ  ನರೇಂದ್ರ ಮೋದಿಯವರ ನಾಯಕತ್ವ, ಜನಪರ ಆಡಳಿತ ಹಾಗೂ ಬಿಜೆಪಿಯ ಸಿದ್ದಾಂತಗಳಿಂದ ಪ್ರಭಾವಿತರಾಗಿ ಬಿಜೆಪಿಯ ಸದಸ್ಯತ್ವನ್ನು ಸ್ವೀಕರಿಸಿರುವ ಅಪರ್ಣ ಯಾದವ್ ಅವರಿಗೆ ಸಚಿವೆ ಶೋಭಾ ಕರಂದ್ಲಾಜೆಯವರು ಪಕ್ಷಕ್ಕೆ ಹಾರ್ದಿಕ ಸ್ವಾಗತವನ್ನು ಕೋರಿದ್ದಾರೆ.

ಉತ್ತರ ಪ್ರದೇಶದ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವರ ಉತ್ಸಾಹ-ಹುಮ್ಮಸ್ಸು ಉತ್ತರಪ್ರದೇಶದಲ್ಲಿ ಪಕ್ಷವನ್ನು ಇನಷ್ಟು ಬಲಿಷ್ಠಗೊಳಿಸಲು ಸಹಾವಾಗಲಿದೆ ಎಂದು ಶೋಭಾ ಕರಂದ್ಲಾಜೆಯವರು ಅಭಿಪ್ರಾಯ ಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next