Advertisement

ಕೇಂದ್ರ ಬಜೆಟ್‌ಗೆ ಆಯೋಗ ಶಾಕ್‌?

03:45 AM Jan 05, 2017 | Team Udayavani |

ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬಜೆಟ್‌ ಮಂಡನೆಯನ್ನು ಹಿಂದೂಡಬಹುದೇ ಎಂಬ ಕುರಿತು ಪರಿಶೀಲಿಸಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರೀಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

Advertisement

ಸಾಮಾನ್ಯವಾಗಿ ಫೆಬ್ರವರಿ ಕೊನೆಯ ವಾರದಲ್ಲಿ ಬಜೆಟ್‌ ಮಂಡನೆಯಾಗುತ್ತದೆ. ಆದರೆ ಈ ಬಾರಿ ಫೆ.1ರಂದೇ ಆಯವ್ಯಯ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಆದರೆ ಇದರ ವಿರುದ್ಧ ಕಾಂಗ್ರೆಸ್‌, ಎಸ್ಪಿ, ಎಡರಂಗ ಸೇರಿದಂತೆ ಹಲವು ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ನೀಡಿವೆ. ಬಜೆಟ್‌ನಲ್ಲಿ ಸರ್ಕಾರ ಹಲವಾರು ಘೋಷಣೆಗಳನ್ನು ಪ್ರಕಟಿಸುವುದರಿಂದ ಮತದಾರರ ಮೇಲೆ ಪ್ರಭಾವ ಬೀರಿದಂತಾಗುತ್ತದೆ. 

ಹೀಗಾಗಿ ಬಜೆಟ್‌ ಹಿಂದೂಡಲು ಅವಕಾಶ ನೀಡಬಾರದು ಎಂದು ಕೋರಿವೆ. ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ರಾಜಕೀಯ ಪಕ್ಷಗಳಿಂದ ಮನವಿ ಬಂದಿದೆ. ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ನಡುವೆ, ಧಾರ್ಮಿಕ ನೆಲೆಯ ಆಧಾರದ ಮೇಲೆ ಮತ ಕೇಳಬಾರದು ಎಂಬ ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಆ ತೀರ್ಪನ್ನು ಪಂಚರಾಜ್ಯ ಚುನಾವಣೆ ವೇಳೆ ಜಾರಿಗೆ ತರಲು ಪ್ರತ್ಯೇಕ ಸೂಚನೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next