Advertisement

ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ ರೇಪ್; ಬೆದರಿಸಿ ಮದುವೆಯಾದವನಿಂದಲೇ ಕೃತ್ಯ

02:12 PM Jun 26, 2022 | Team Udayavani |

ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಕುರಿತು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ವರ್ಷದ ಹಿಂದೆ ಬಾಲಕಿಯನ್ನು ಬೆದರಿಸಿ ಬಲವಂತವಾಗಿ ಮದುವೆಯಾಗಿದ್ದ ಯುವಕ ಹಾಗೂ ಮೂವರು ಸ್ನೇಹಿತರು ಜೂನ್ 7ರಂದು ನಗರದ ಹೊರವಲಯಕ್ಕೆ ಬಾಲಕಿಯನ್ನು ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು. ಕೃತ್ಯದ ಬಗ್ಗೆ ದೂರು ನೀಡದಂತೆ ಬಾಲಕಿಗೆ ಕೊಲೆ ಬೆದರಿಕೆ ಹಾಕಿ, ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆದಿತ್ತು ಎಂದು ದೂರಿನಲ್ಲಿ ಹೇಳಲಾಗಿದೆ.

ವರ್ಷದ ಹಿಂದೆ ತನ್ನನು ಬೆದರಿಸಿ  ಮದುವೆಯಾಗಿದ್ದ ವ್ಯಕ್ತಿ ,ಮದುವೆಯ ಬಳಿಕ ಶೀಲ ಶಂಕಿಸಿ ಆಗಾಗ ಗಲಾಟೆ ಮಾಡುತ್ತಿದ್ದ. ಜೂ. 7 ರಂದು ಸ್ನೇಹಿತರ ಜತೆಗೂಡಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.

ಈ ಕುರಿತು ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next