Advertisement

shocking; ಗುತ್ತಿಗಾರು- ಕೋಳಿ ಪದಾರ್ಥ ವಿಚಾರದಲ್ಲಿ ತಂದೆಯಿಂದಲೇ ಮಗನ ಕೊಲೆ

12:01 PM Apr 05, 2023 | Team Udayavani |

ಗುತ್ತಿಗಾರು: ಕೋಳಿ ಪದಾರ್ಥಕ್ಕೆ ಸಂಬಂಧಿಸಿ ಜಗಳ ಆರಂಭವಾಗಿ ಮಾತಿಗೆ ಮಾತು ಬೆಳೆದು ತಂದೆ ಮಗನನ್ನು ಕೊಂದ ಘಟನೆ ಕಳೆದ ರಾತ್ರಿ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಬಳಿ ನಡೆದಿದೆ.

Advertisement

ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಎಂಬವರಿಗೂ ಅವರ ಮಗ ಶಿವರಾಮ(32) ಎಂಬವರಿಗೂ ನಿನ್ನೆ ರಾತ್ರಿ 12 ಗಂಟೆಗೆ ಕೋಳಿ ಪದಾರ್ಥದ ವಿಚಾರವಾಗಿ ಜಗಳ ಆರಂಭವಾಯಿತು. ಶಿವರಾಮ ರಾತ್ರಿ ಮನೆಗೆ ಬರುವಾಗ ಕೋಳಿ ಪದಾರ್ಥ ಖಾಲಿ ಆಗಿತ್ತೆನ್ನಲಾಗಿದೆ. ಇದನ್ನು ಆಕ್ಷೇಪಿಸಿ ಆತ ಮಾತನಾಡತೊಡಗಿದಾಗ ತಂದೆ ಶೀನರಿಗೂ ಆತನಿಗೂ ಜಗಳ ಆರಂಭವಾಯಿತು. ಕೋಪಗೊಂಡ ಶೀನ ಬಡಿಗೆಯಿಂದ ಮಗನ ತಲೆಗೆ ಹೊಡೆದರೆನ್ನಲಾಗಿದೆ. ಏಟು ಬಲವಾಗಿ ಬಿದ್ದು ತಲೆಯ ಬುರುಡೆ ಒಡೆಯಿತು. ಪರಿಣಾಮವಾಗಿ ಶಿವರಾಮ ಸ್ಥಳದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಗಿ ವರದಿಯಾಗಿದೆ.

ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ಶೀನನನ್ನು ಬಂಧಿಸಿದ್ದಾರೆ. ಶಿವರಾಮರ ಮೃತ ದೇಹವನ್ನು ಕಡಬ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next