Advertisement

ಮಂಗಳೂರು: ಬೋಟ್ ನಲ್ಲಿ ಮೊಬೈಲ್ ಕದ್ದನೆಂದು ತಲೆಕಳೆಗೆ ತೂಗು ಹಾಕಿ ಹಲ್ಲೆ

11:39 AM Dec 23, 2021 | Team Udayavani |

ಮಂಗಳೂರು: ನಗರದ ಬಂದರ್ ನಲ್ಲಿ ಮೀನುಗಾರನೊಬ್ಬನನ್ನು ಬೋಟ್ ನಲ್ಲಿ ತಲೆಕೆಳಗಾಗಿಸಿ ನೇತು ಹಾಕಿ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Advertisement

ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರ ಪ್ರದೇಶ ಮೂಲದ ಮೀನುಗಾರ ವೈಲ ಸೀನು ಎಂದು ಗುರುತಿಸಲಾಗಿದೆ.

ಮೀನುಗಾರಿಕಾ ಬೋಟ್ ನಲ್ಲಿ ಮೊಬೈಲ್ ಕಳ್ಳತನ ಮಾಡಿದ ಆರೋಪದ ಮೇಲೆ ಈತನಿಂದ ಸತ್ಯವನ್ನು ಹೊರ ಹಾಕಿಸಲು, ಬೆದರಿಸಿ ಇತರ ಮೀನುಗಾರ ಕಾರ್ಮಿಕರು ಬೋಟ್ ನ ಹುಕ್ಸ್ ಗೆ ಕಾಲನ್ನು ಕಟ್ಟಿ ಹಾಕಿ, ತೂಗಿ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ಪ್ರಾಥಮಿಕ ಮಾಹಿತಿ ಸಿಕ್ಕಿದೆ.

ದೌರ್ಜನ್ಯ ಎಸಗಿದವರ ವಿರುದ್ಧ ಪಾಂಡೇಶ್ವರ ಪೊಲೀಸರು ಕೊಲೆಯತ್ನದ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಈ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next