Advertisement

ಸಂಕೇಶ್ವರ: ಮಹಿಳೆಯೋರ್ವಳ ಗುಂಡಿಕ್ಕಿ ಹತ್ಯೆ; ಬೆಚ್ಚಿ ಬಿದ್ದ ಗ್ರಾಮಸ್ಥರು

03:00 PM Jan 16, 2022 | Team Udayavani |

ಸಂಕೇಶ್ವರ: ಮಹಿಳೆಯೋರ್ವಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಗರದ ಹೃದಯ ಭಾಗದ ಮನೆಯೊಂದರಲ್ಲಿ ರವಿವಾರ ಬೆಳಿಗ್ಗೆ ನಡೆದಿದೆ.

Advertisement

ನಿರಂಜನ ಸುಬೇದಾರ ಅವರ ಪತ್ನಿ  ಶೈಲಜಾ ಉರ್ಫ್ ಗೌರವ (55) ಹತ್ಯೆಯಾಗಿರುವ ದುರ್ಧೈವಿಯಾಗಿದ್ದಾರೆ. ಇವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಆಸ್ತಿ ವಿವಾದ ಅಥವಾ ಹಣಕಾಸಿನ ವಿಷಯದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು‌ ಎಂದು ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಮಹಾಲಿಂಗ ನಂದಗಾವಿ, ಹಾಗೂ ಡಿಎಸ್.ಪಿ ಮನೋಜಕುಮಾರ ನಾಯಿಕ, ಸಂಕೇಶ್ವರ ಪಿಎಸ್ ಐ ಗಣಪತಿ ಕೊಂಗನೋಳಿ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next