Advertisement

ಶಿಡ್ಲಘಟ್ಟ: ವೃದ್ಧ ದಂಪತಿಗಳ ಭೀಕರ ಕೊಲೆ

11:24 AM Feb 11, 2022 | Team Udayavani |

ಶಿಡ್ಲಘಟ್ಟ: ನಗರದ ಹೃದಯ ಭಾಗದ ಕಾಮಾಟಿಗರ ಪೇಟೆಯ ವಾಸವಿ ಕಲ್ಯಾಣ ಮಂಟಪದ ಹಿಂಭಾಗದಲ್ಲಿ ವೃದ್ದ ದಂಪತಿಗಳನ್ನು ಮಾರಕಾಯುಧಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

Advertisement

ಶ್ರೀನಿವಾಸ್ ಅಲಿಯಾಸ್ ದೊಂತಿ ಸೀನಪ್ಪ(76), ಪತ್ನಿ ಪದ್ಮಾವತಿ(67) ಕೊಲೆಯಾದ ದುರ್ದೈವಿಗಳು.

ಮನೆಯಲ್ಲಿ ಇಬ್ಬರಷ್ಟೆ ವಾಸಿಸುತ್ತಿದ್ದು ಹಣ ಚಿನ್ನಾಭರಣಗಳಿಗಾಗಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ಮನೆಯಲ್ಲಿನ ಬೀರು ಕಪಾಟುವನ್ನು ಕಿತ್ತು ಬಟ್ಟೆ ಬರೆಯನ್ನು ಚೆಲ್ಲಾಡಿದ್ದು ಹಣ ಚಿನ್ನಾಭರಗಳನ್ನು ಕದ್ದೊಯ್ದಿದ್ದು ಎಷ್ಟು ಎಂಬುದರ ನಿಖರ ಮಾಹಿತಿ ಇಲ್ಲ, ಹಳೆಯ ಮನೆ ಇದಾಗಿದ್ದು ಮನೆಯ ಮೇಲ್ಚಾವಣಿಯಲ್ಲಿನ ಗವಾಕ್ಷಿ(ಮನೆಯೊಳಗೆ ಬೆಳಕಿಗಾಗಿ ಕಿಂಡಿ) ಮೂಲಕ ಮನೆಯೊಳಗೆ ನುಗ್ಗಿರುವ ದುಷ್ಕರ್ಮಿಗಳು ವೃದ್ಧ ದಂಪತಿಗಳನ್ನು ಅಮಾನುಷವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಪದ್ಮಾವತಿ ಅವರ ತಲೆ ಹಿಡಿದು ಬಾಗಿಲ ವಸಲಿಗೆ ಹಣೆಯನ್ನು ಚಚ್ಚಿದ ರೀತಿಯಲ್ಲಿದ್ದರೆ ಶ್ರೀನಿವಾಸ್ ಅವರ ತಲೆಗೆ ಮಾರಕಾಯುಧದಿಂದ ಹೊಡೆದ ರೀತಿಯಲ್ಲಿ ಇಬ್ಬರ ಹೆಣಗಳೂ ರಕ್ತದ ಮಡುವಿನಲ್ಲಿ ಬಿದ್ದಿದ್ದವು, ಶ್ರೀನಿವಾಸ್ ಅವರ ಮೈ ಮೇಲೆ ಬಟ್ಟೆಗಳು ಇರಲಿಲ್ಲ ಬುಧವಾರ ರಾತ್ರಿ ಸುಮಾರು 10.30ರ ಆಸುಪಾಸಿನಲ್ಲಿ ಶ್ರೀನಿವಾಸ್ ಹಾಗೂ ಪದ್ಮಾವತಿ ದಂಪತಿಗಳು ಮನೆಯಲ್ಲಿ ಮಾತನಾಡಿಕೊಳ್ಳುವ ಸದ್ದು ಅಕ್ಕ ಪಕ್ಕದವರು ಸಹಜವಾಗಿ ಕೇಳಿಸಿಕೊಂಡಿದ್ದಾರೆ ಹಾಗಾಗಿ ನಡು ರಾತ್ರಿಯ ನಂತರ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ ಪೊಲೀಸರು ಮನೆಯೊಳಗೆ ಪ್ರವೇಶ ಮಾಡಿದಾಗ ಶವದ ಮೇಲೆ ಇರುವೆಗಳು ಓಡಾಡುತ್ತಿದ್ದು ಕೊಲೆಯಾಗಿ 8-10 ಗಂಟೆಗಳಿಗೂ ಹೆಚ್ಚು ಸಮಯ ಆಗಿರಬಹುದೆಂದು ಅಂದಾಜಿಸಲಾಗಿದೆ.

ಮನೆ ಕೆಲಸದಾಕೆ ಗುರುವಾರ ಬೆಳಗ್ಗೆ ಬಂದು ಬಾಗಿಲು ಬಡಿದರೂ ಬಾಗಿಲು ತೆಗೆಯದೆ ಇದ್ದಾಗ ಹಿಂಬಾಗಿಲ ಮೂಲಕ ಮನೆಯೊಳಗೆ ತೆರಳಿದಾಗ ಶ್ರೀನಿವಾಸಪ್ಪ ಮನೆಯೊಳಗೆ ಬಿದ್ದಿದ್ದು ಕಂಡು ಭಯಭೀತರಾಗಿ ನೆರೆಹೊರೆಯವರಿಗೆ ಮಾಹಿತಿ ನೀಡಿದ್ದಾರೆ ಅಕ್ಕಪಕ್ಕದವರು ಮನೆ ಒಳಗೆ ಹೋಗಿ ನೋಡಿದಾಗ ಶ್ರೀನಿವಾಸ್ ಪದ್ಮಾವತಿ ಸಹ ರಕ್ತದ ಮಡುವಿನಲ್ಲಿ ಬಿದ್ದಿದ್ದು ಕಂಡು ಬಂದಿದ್ದು ಘಟನೆ ಬೆಳಕಿಗೆ ಬಂದಿದೆ.

Advertisement

ಪದ್ಮಾವತಿ ಶ್ರೀನಿವಾಸ್ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಅವರನ್ನು ಮದುವೆ ಮಾಡಿದ್ದಾರೆ ಇಬ್ಬರು ಪುತ್ರಿಯರು ಬೆಂಗಳೂರಲ್ಲಿ ನೆಲೆಸಿದ್ದಾರೆ ಹಾಗಾಗಿ ವೃದ್ದ ದಂಪತಿಗಳಿಬ್ಬರಷ್ಟೆ ಮನೆಯಲ್ಲಿ ವಾಸವಿದ್ದರು. ವಾಸವಿ ರಸ್ತೆಯಲ್ಲಿನ ಜವಳಿ(ಬಟ್ಟೆ) ಅಂಗಡಿಯನ್ನು ನಡೆಸುತ್ತಿದ್ದ ಶ್ರೀನಿವಾಸ್ ಬಟ್ಟೆ ಅಂಗಡಿ ಸೀನಪ್ಪ ಎಂದೆ ಚಿರಪರಿಚಿತರಾಗಿದ್ದರು. ಶಿಡ್ಲಘಟ್ಟ ನಗರದಲ್ಲಿನ ತುಂಬಾ ಹಳೆಯದಾದ ದೊಂತಿಯವರ  ಛತ್ರದ ಮಾಲೀಕರಲ್ಲಿ ಇವರೂ ಒಬ್ಬರಾಗಿದ್ದಾರೆ.

ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾತನಾಡಿ ವೃಧ್ಧ ದಂಪತಿಗಳನ್ನು ಕೊಲೆ ಮಾಡಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲು ಈಗಾಗಲೇ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಲಾಗಿದೆ ಆರೋಪಿಗಳ ಸುಳಿವು ಲಭಿಸಿದ್ದು ಅವರನ್ನು ಬಂಧಿಸಲು ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಭಾತ ಸಿಪಿಐ ಪುರುಷೋತ್ತಮ್, ಎಸ್‍ಐ ಸತೀಶ್ ಇನ್ನಿತರರು ಭೇಟಿ ನೀಡಿ ಪರಿಶೀಲಿಸಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

ಹಿರಿಯ ದಂಪತಿಗಳಿಬ್ಬರ  ಜೋಡಿ ಕೊಲೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದರು, ವೃದ್ದ ದಂಪತಿಗಳನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆಯಿಂದ ನಾಗರಿಕರು ತೀವ್ರ ಆತಂಕಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next