ತೀರ್ಥಹಳ್ಳಿ : ಪಟ್ಟಣದ ಹೃದಯ ಭಾಗದಲ್ಲಿ ಇರುವ ತರಕಾರಿ ಮಾರ್ಕೆಟ್ ಮಾರ್ಕೆಟ್ ಬಳಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ನಿನ್ನೆ (ಶುಕ್ರವಾರ) ತಡರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್ ಎಂದು ಗುರುತಿಸಲಾಗಿದೆ. ಮದ್ಯವ್ಯಸನಿಯಾಗಿದ್ದ ಪೂರ್ಣೇಶ್, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ. ಇದೀಗ ಅವರ ಕೊಲೆಯಾಗಿದೆ.
ಘಟನೆಗೆ ಕಾರಣ ಇನ್ನು ಸ್ಪಷ್ಟವಾಗಿಲ್ಲವಾದರೂ ವೈಯಕ್ತಿಕ ಕಲಹದಿಂದಾಗಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ