Advertisement

ತೀರ್ಥಹಳ್ಳಿ : ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಹತ್ಯೆ

11:33 AM Mar 25, 2023 | Suhan S |

ತೀರ್ಥಹಳ್ಳಿ : ಪಟ್ಟಣದ ಹೃದಯ ಭಾಗದಲ್ಲಿ ಇರುವ ತರಕಾರಿ ಮಾರ್ಕೆಟ್ ಮಾರ್ಕೆಟ್ ಬಳಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ನಿನ್ನೆ (ಶುಕ್ರವಾರ) ತಡರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂದು ಗುರುತಿಸಲಾಗಿದೆ.  ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ. ಇದೀಗ ಅವರ ಕೊಲೆಯಾಗಿದೆ.

ಘಟನೆಗೆ ಕಾರಣ ಇನ್ನು ಸ್ಪಷ್ಟವಾಗಿಲ್ಲವಾದರೂ ವೈಯಕ್ತಿಕ ಕಲಹದಿಂದಾಗಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next