Advertisement

ವಿಡಿಯೋ ವೈರಲ್: ಸರ್ಕಾರಿ ಆಸ್ಪತ್ರೆ ಆ್ಯಂಬುಲೆನ್ಸ್ ನಲ್ಲಿ ಶೂ ಸಾಗಾಟ…ಕೆಲಸದಿಂದ ಚಾಲಕ ವಜಾ

01:21 PM Feb 24, 2023 | Team Udayavani |

ದೌಸಾ(ರಾಜಸ್ಥಾನ): ಜೈಪುರದಿಂದ ದೌಸಾಗೆ ಸರ್ಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಶೂಗಳನ್ನು ಸಾಗಾಟ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಆ್ಯಂಬುಲೆನ್ಸ್ ಚಾಲಕನ್ನು ಕೆಲಸದಿಂದ ವಜಾಗೊಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

Advertisement

ಇದನ್ನೂ ಓದಿ:ಬಾರ್ಡರ್- ಗಾವಸ್ಕರ್ ಟ್ರೋಫಿ; ಮೂರನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಆಸೀಸ್ ಕ್ಯಾಪ್ಟನ್!

ಎಎನ್ ಐ ಜೊತೆ ಮಾತನಾಡಿದ ದೌಸಾ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ (ಪಿಎಂಒ) ಡಾ.ಶಿವರಾಮ್ ಮೀನಾ, ಎನ್ ಜಿಒ ನೇಮಕ ಮಾಡಿದ್ದ ಆ್ಯಂಬುಲೆನ್ಸ್ ಚಾಲಕನನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ಖಚಿತಪಡಿಸಿದ್ದಾರೆ.

ಈ ಘಟನೆ ಬಗ್ಗೆ ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿರುವುದಾಗಿ ಡಾ.ಮೀನಾ ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಸಮಿತಿ ತನಿಖಾ ವರದಿಯನ್ನು ನೀಡಿದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಒಂದು ವೇಳೆ ಅಗತ್ಯವಿದ್ದರೆ ಆರೋಪಿ ವಿರುದ್ಧ ಸಂಬಂಧಿತ ಪ್ರಕರಣಗಳ ಅಡಿ ಪ್ರಕರಣ ದಾಖಲು ಮಾಡಬಹುದಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಈ ಘಟನೆ ಗುರುವಾರ ಬೆಳಗ್ಗೆ ನನ್ನ ಗಮನಕ್ಕೆ ಬಂದಿದ್ದು, ಸೂಕ್ತ ತನಿಖೆ ನಡೆಸುವುದಾಗಿ ಡಾ.ಮೀನಾ ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next