Advertisement

ವಾಕಿಂಗ್ ಮಾಡುತ್ತಿದ್ದಾಗ ಬಿಜೆಪಿ ಶಾಸಕನ ಸಂಬಂಧಿಯ ಗುಂಡಿಕ್ಕಿ ಕೊಲೆ!

02:12 PM Oct 09, 2020 | keerthan |

ಲಕ್ನೋ( ಉತ್ತರ ಪ್ರದೇಶ): ಮನೆಯ ಬಳಿ ವಾಕಿಂಗ್ ನಡೆಸುತ್ತಿದ್ದ ವೇಳೆ ಬಿಜೆಪಿ ಶಾಸಕನ ಸಂಬಂಧಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಗಾಜೀಯಾಬಾದ್ ನಲ್ಲಿ ಇಂದು ಮುಂಜಾನೆ ನಡೆದಿದೆ.

Advertisement

ಗಾಜೀಯಾಬಾದ್ ನ ಸಿಹಾನಿ ಗೇಟ್ ಬಳಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಹತ್ಯೆಯಾದ ವ್ಯಕ್ತಿಯು ಮುರಾದನಗರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಜಿತ್ ಪಾಲ್ ಅವರ ಸಂಬಂಧಿ ಎನ್ನಲಾಗಿದೆ.

ಹತ್ಯೆಯಾದ ವ್ಯಕ್ತಿ ಪ್ರತಿದಿನ ಬೆಳಿಗ್ಗೆ ವಾಕಿಂಗ್ ಮಾಡುವ ಅಭ್ಯಾಸ ಹೊಂದಿದ್ದು, ಇದನ್ನು ಗಮನಿಸಿ ಯೋಜನೆ ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಇದನ್ನೂ ಓದಿ:ಲಿಬಿಯಾ: ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏಳು ಮಂದಿ ಭಾರತೀಯರ ಅಪಹರಣ!

ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತನಿಖೆ ಆರಂಭವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next