ವಾಷಿಂಗ್ಟನ್ ಡಿಸಿ: ಪಾರ್ಟಿಯೊಂದರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಬಾಲಕ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಘಟನೆ ಅಮೇರಿಕಾದ ವಾಷಿಂಗ್ಟನ್ ಡಿಸಿ ನಗರದಲ್ಲಿ ರವಿವಾರ ನಡೆದಿದೆ.
17 ವರ್ಷದ ಬಾಲಕನೋರ್ವ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ. ಮತ್ತೋರ್ವರು ಗಂಭೀರವಾಗಿದ್ದಾರೆ ಎಂದು ವರದಿಯಾಗಿದೆ.
ನಗರದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಮ್ಯೂಸಿಕ್ ಪಾರ್ಟಿ ನಡೆಸುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಪೀಟರ್ ನ್ಯೂಶ್ಯಾಮ್ ಹೇಳಿದ್ದಾರೆ.
ರಜೆಯ ಮೇಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ಕೂಡಾ ಘಟನೆಯಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲವಾರು ಶಸ್ತ್ರಾಸ್ತ್ರಗಳನ್ನು ವಶಪಡಿಸಲಾಗಿದೆ. ಆದರೆ ಯಾವ ಕಾರಣಕ್ಕೆ ದಾಳಿ ನಡೆದಿದೆ, ಯಾರು ದಾಳಿ ನಡೆಸಿದ್ದಾರೆ ಎಂದು ಇದುವರೆಗೂ ವರದಿಯಾಗಿಲ್ಲ.